ರಫಾದಲ್ಲಿ ಇಸ್ರೇಲ್ ದಾಳಿ: ಭಾರತ ಮೂಲದ ವಿಶ್ವಸಂಸ್ಥೆ ಸಿಬ್ಬಂದಿ ಸಾವು

Prasthutha|

ವಿಶ್ವಸಂಸ್ಥೆ: ಗಾಝಾದಲ್ಲಿ ವಿಶ್ವಸಂಸ್ಥೆಯೊಂದಿಗೆ ಕೆಲಸ ಮಾಡುತ್ತಿದ್ದ ಭಾರತೀಯ ಮೂಲದ ಸಿಬ್ಬಂದಿಯೊಬ್ಬರು ಇಸ್ರೇಲ್-ಹಮಾಸ್ ಸಂಘರ್ಷದಲ್ಲಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ಸೋಮವಾರ ಬೆಳಿಗ್ಗೆ ರಫಾದಲ್ಲಿ ಭಾರತೀಯ ಸಿಬ್ಬಂದಿ ಪ್ರಯಾಣಿಸುತ್ತಿದ್ದ ವಾಹನದ ಮೇಲೆ ದಾಳಿ ನಡೆದಿದ್ದು, ಅವರು ಸಾವಿಗೀಡಾಗಿದ್ದಾರೆ. ಮೃತ ವ್ಯಕ್ತಿ ವಿಶ್ವಸಂಸ್ಥೆಯ ಸುರಕ್ಷತೆ ಮತ್ತು ಭದ್ರತಾ ವಿಭಾಗದ (DSS ) ಸದಸ್ಯರಾಗಿದ್ದರು. ಅವರ ಗುರುತನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ. ಆದರೆ ಅವರು ಭಾರತೀಯ ಸೇನೆಯ ಮಾಜಿ ಸಿಬ್ಬಂದಿ ಎಂದು ಮೂಲಗಳು ಖಚಿತಪಡಿಸಿವೆ ಎಂದು ಪಿಟಿಐ ವರದಿ ಮಾಡಿದೆ.
ಅಕ್ಟೋಬರ್ 7ರಂದು ಆರಂಭವಾದ ಇಸ್ರೇಲ್-ಹಮಾಸ್ ಸಂಘರ್ಷದಲ್ಲಿ ಕೊಲ್ಲಲ್ಪಟ್ಟ ಮೊದಲ ಭಾರತೀಯ ವಿಶ್ವಸಂಸ್ಥೆ ಸಿಬ್ಬಂದಿ ಇವರಾಗಿದ್ದಾರೆ.



Join Whatsapp