ಮುಂಬೈ: ವಾಣಿಜ್ಯ ನಗರಿ ಮುಂಬೈಯ ಘಾಟ್ಕೋಪರ್ ಪ್ರದೇಶದಲ್ಲಿ ಹೋರ್ಡಿಂಗ್ ಕುಸಿದು ಬಿದ್ದು ಮೃತಪಟ್ಟವರ ಸಂಖ್ಯೆ 14 ಕ್ಕೆ ಏರಿದ್ದು, 74 ಜನರು ಗಾಯಗೊಂಡಿದ್ದಾರೆ ಎಂದು ಮಹಾನಗರ ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.
ಸೋಮವಾರ ಮುಂಬೈಯಲ್ಲಿ ಸಾಯಂಕಾಲ ಹೊತ್ತಿನಲ್ಲಿ ಭಾರೀ ಧೂಳು ಬಿರುಗಾಳಿ ಮತ್ತು ಅಕಾಲಿಕ ಮಳೆ ಸುರಿಯಿತು. ಈ ಸಂದರ್ಭದಲ್ಲಿ ಭಾರೀ ಗಾಳಿಗೆ ಘಾಟ್ ಕೋಪರ್ ನ ಪೆಟ್ರೋಲ್ ಪಂಪ್ ನಲ್ಲಿ 100 ಅಡಿ ಎತ್ತರದ ಅಕ್ರಮವಾಗಿ ಅಳವಡಿಸಿದ್ದ ಜಾಹೀರಾತು ಫಲಕ ಕೆಳಗೆ ಬಿದ್ದಿದೆ. ಮೃತರ ಸಂಖ್ಯೆ 14 ಕ್ಕೆ ಏರಿದೆ, ಗಾಯಗೊಂಡವರ ಸಂಖ್ಯೆ 74ಕ್ಕೆ ಏರಿದ್ದು, ಗಾಯಗೊಂಡವರಲ್ಲಿ 31 ಜನರನ್ನು ರಾಜವಾಡಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಮತ್ತು 35 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ, ಅವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಬಿಎಂಸಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ಅವಲೋಕಿಸಿದರು. ಗಾಯಾಳುಗಳಿಗೆ ಅಗತ್ಯ ಚಿಕಿತ್ಸೆ ನೀಡಲಾಗುವುದು ಮತ್ತು ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿಗಳನ್ನು ನೀಡಲಾಗುವುದು ಎಂದು ಭರವಸೆ ನೀಡಿದರು. ಮುಂದಿನ ದಿನಗಳಲ್ಲಿ ಇಂತಹ ದುರ್ಘಟನೆಗಳನ್ನು ತಡೆಯಲು ಮಹಾನಗರ ಮುಂಬೈಯಲ್ಲಿರುವ ಜಾಹೀರಾತು ಫಲಕಗಳ ಲೆಕ್ಕಪರಿಶೋಧನೆ ನಡೆಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.
#WATCH | Mumbai's Ghatkopar hoarding collapse incident: Rescue and search operation underway by NDRF
— ANI (@ANI) May 14, 2024
The death toll in the Ghatkopar hoarding collapse incident has risen to 14. pic.twitter.com/YpdCDeu5fb