ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರ: 6 ಮಂದಿಯ ಬಂಧನ

Prasthutha|

ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರವೆಸಗಿದ್ದ ಮೂವರು ಅಪ್ರಾಪ್ತರು ಸೇರಿ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -


ತಮಿಳುನಾಡಿನ ತಿರುಪ್ಪೂರ್ ಜಿಲ್ಲೆಯಲ್ಲಿ ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮೂವರು ಅಪ್ರಾಪ್ತರು ಸೇರಿದಂತೆ ಆರು ಮಂದಿಯನ್ನು ಬಂಧಿಸಲಾಗಿದೆ.


ಪೊಲೀಸರು ಜಯ ಕಾಳೀಶ್ವರನ್, ಮಥನ್ ಕುಮಾರ್, ಬರಣಿ ಕುಮಾರ್ ಮತ್ತು ಇತರ ಮೂವರು ಬಾಲಕರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.

- Advertisement -


ಇಬ್ಬರು ಬಾಲಕಿಯರು 13 ಮತ್ತು 17 ವರ್ಷ ವಯಸ್ಸಿನವರಾಗಿದ್ದಾರೆ. 17 ವರ್ಷದ ಬಾಲಕಿ ಗರ್ಭಿಣಿಯಾಗಿದ್ದು, ಆಕೆಯ ಸಂಬಂಧಿಕರಿಗೆ ಮಾಹಿತಿ ನೀಡಿದ ನಂತರ ಘಟನೆ ಬೆಳಕಿಗೆ ಬಂದಿದೆ.



Join Whatsapp