ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ನಾಶ: ರಾಹುಲ್ ಗಾಂಧಿ

Prasthutha|

ಬೋಲಂಗೀರ್ : ಬಿಜೆಪಿಯು ಸಂವಿಧಾನವನ್ನು ನಾಶಪಡಿಸಲು ಮತ್ತು ಮೀಸಲಾತಿಯನ್ನು ರದ್ದುಗೊಳಿಸಲು ಬಯಸುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಆರೋಪಿಸಿದ್ದಾರೆ.

- Advertisement -


ಒಡಿಶಾದ ಬೋಲಂಗೀರ್ ನಲ್ಲಿ ಚುನಾವಣಾ ಸಮಾವೇಶ ಉದ್ದೇಶಿಸಿ ಮಾತನಾಡಿದರು. ಸಂವಿಧಾನದ ಪುಸಕ್ತದ ಪ್ರತಿಯನ್ನು ಕೈಯಲ್ಲಿ ಹಿಡಿದು ಭಾಷಣ ಮಾಡಿದ ರಾಹುಲ್ ಗಾಂಧಿ, ‘ಈ ಪುಸ್ತಕವನ್ನು ಹರಿದು ಬಿಸಾಡಲು ಬಿಜೆಪಿ ಬಯಸುತ್ತಿದೆ. ಆದರೆ ಹಾಗೇ ಆಗಲು ಕಾಂಗ್ರೆಸ್ ಹಾಗೂ ಈ ದೇಶದ ಜನತೆ ಬಿಡುವುದಿಲ್ಲ’ ಎಂದು ಹೇಳಿದ್ದಾರೆ.



Join Whatsapp