ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಕ್ರಿಕೆಟ್ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿದೆ.
ಟಾಸ್ ಸೋತು ಬ್ಯಾಟಿಂಗ್ಗೆ ಇಳಿದಿದ್ದ ಕೆ.ಎಲ್. ರಾಹುಲ್ ನೇತೃತ್ವದ ಲಖನೌ ಸೂಪರ್ ಜೈಂಟ್ಸ್ 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 214 ರನ್ ಕಲೆ ಹಾಕಿತ್ತು.
ಈ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡಕ್ಕೆ 20 ಓವರ್ಗಳಲ್ಲಿ 196 ರನ್ ಮಾತ್ರ ಗಳಿಸಿ ತನ್ನ ಕೊನೆಯ ಲೀಗ್ ಪಂದ್ಯವನ್ನು ತವರಿನ ಮೈದಾನದಲ್ಲಿ ಸೋತು ತೀವ್ರ ಮುಖಭಂಗಕ್ಕೆ ಒಳಗಾಯಿತು.
ಗೆದ್ದರೂ ಪ್ಲೇಆಫ್ಗೆ ಲಗ್ಗೆಯಿಡಲಾಗದ ಲಕ್ನೋ 6ನೇ ಸ್ಥಾನಕ್ಕೇರಿದ್ದು, ಸತತ 3ನೇ ಬಾರಿಗೆ ಅಗ್ರ-4ರಲ್ಲಿ ಸ್ಥಾನ ಪಡೆಯಲು ವಿಫಲವಾಯಿತು.