ಬೆಂಗಳೂರು : ರಾಜ್ಯ ಸರಕಾರ ನೇರವಾಗಿ ಜನರ ಬ್ಯಾಂಕ್ ಖಾತೆಗೆ ಜಮೆ ಮಾಡುವ ಬರ ಪರಿಹಾರ, ವಿವಿಧ ಯೋಜನೆಗಳ ಸಹಾಯಧನ, ಸಾಮಾಜಿಕ ನೆರವು ಯೋಜನೆಯ ಸಹಾಯಧನ ಮುಂತಾದನ್ನು ರೈತರ ಒಪ್ಪಿಗೆ ಇಲ್ಲದೆ ಅವರ ಸಾಲದ ಖಾತೆಗೆ ಹಣ ಹೊಂದಾಣಿಕೆ ಮಾಡಬಾರದು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಸಿಎಂ ವಿವಿಧ ಇಲಾಖೆಗಳ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಸುದೀರ್ಘ ಸಭೆ ನಡೆಸಿದ್ದು, ಬರ ಪರಿಹಾರ, ಪಿಂಚಣಿ ಹಣವನ್ನು ರೈತರ ಅನುಮತಿ ಇಲ್ಲದೆ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕೆಂದು ಸೂಚಿಸಿದ್ದಾರೆ.
ಕೆಲವು ಕಡೆ ಬ್ಯಾಂಕಗಳು ಪರಿಹಾರ ಹಣವನ್ನು ರೈತರ ಸಾಲಕ್ಕೆ ಹೊಂದಿಸುತ್ತಿರುವ ಕುರಿತು ದೂರು ವರದಿಗಳು ಬರುತ್ತಿವೆ. ಈ ವಿಷಯದಲ್ಲಿ ಸರಕಾರ ಮತ್ತು ಜಿಲ್ಲಾಡಳಿತ ನೀಡಿರುವ ನಿರ್ದೇಶನ ಉಲ್ಲಂಘಿಸಿದರೆ ಅಂತಹ ಬ್ಯಾಂಕಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಸಿಎಂ ತಿಳಿಸಿದ್ದಾರೆ.