ಜೂ.14 ರಿಂದ SSLC ಪರೀಕ್ಷೆ-2 ಪ್ರಾರಂಭ: ವಿಶೇಷ ಪರಿಹಾರ ಬೋಧನೆ ತರಗತಿ ಮುಂದೂಡಿಕೆ

Prasthutha|

ಬೆಂಗಳೂರು: ಮೇ.15 ರಿಂದ ಆರಂಭವಾಗಿದ್ದ ಎಸ್ ಎಸ್ ಎಲ್ ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

- Advertisement -


ಈ ಹಿನ್ನಲೆ ಎಸ್. ಎಸ್.ಎಲ್.ಸಿ. ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಜೂನ್ 07 ರಿಂದ ನಡೆಯಬೇಕಿದ್ದ ಎಸ್. ಎಸ್.ಎಲ್.ಸಿ ಪರೀಕ್ಷೆ-2 ಯನ್ನು ಕೂಡ ಮುಂದೂಡಲಾಗಿದ್ದು, ಅದನ್ನು ಜೂ.14 ರಿಂದ ಪ್ರಾರಂಭಿಸಲು ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ.


ಈ ಹಿಂದೆ ಮೇ 15ರಿಂದ ಜೂನ್ 5ರವರೆಗೆ ವಿಶೇಷ ಪರಿಹಾರ ಬೋಧನೆ ತರಗತಿ ನಡೆಸಲು ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಆದರೆ, ಈಗ ಸರ್ಕಾರದ ಸೂಚನೆ ಮೇರೆಗೆ ದಿನಾಂಕವನ್ನು ಮುಂದೂಡಿರುವ ಪ್ರೌಢ ಶಿಕ್ಷಣ ಇಲಾಖೆ, ವಿಶೇಷ ತರಗತಿಗಳನ್ನು ಮೇ 29 ರಿಂದ ಜೂನ್ 13ರವರೆಗೆ ನಡೆಸಲು ಆದೇಶ ನೀಡಲಾಗಿದೆ.

Join Whatsapp