ಬೆಳ್ತಂಗಡಿ: ಚಾರ್ಮಾಡಿ ಘಾಟ್ ನ ಅಣ್ಣಪ್ಪ ಸ್ವಾಮಿ ದೇವಸ್ಥಾನ ಬಳಿ ರಸ್ತೆ ಮಧ್ಯದಲ್ಲೇ ಎರಡು ಕೆ ಎಸ್ ಆರ್ ಟಿ ಸಿ ಬಸ್ಸುಗಳು ಕೆಟ್ಟು ನಿಂತ ಘಟನೆ ನಡೆದಿದ್ದು, ಪರಿಣಾಮ ನೂರಾರು ವಾಹನಗಳು ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದೆ.
ಗಂಟೆ ಗಟ್ಟಲೇ ಟ್ರಾಫಿಕ್ ಜಾಮ್ ಹಿನ್ನೆಲೆಯಲ್ಲಿ ವಿಷಯ ತಿಳಿದ ಹೈವೇ ಪಟ್ರೋಲ್ ನ ಎ. ಎಸ್.ಐ ಶಶಿ ಮತ್ತು ಪೊಲೀಸ್ ವಾಹನ ಚಾಲಕ ಸ್ಥಳಕ್ಕೆ ಧಾವಿಸಿ ಟ್ರಾಫಿಕ್ ಕ್ಲಿಯರ್ ಮಾಡಲು ಹರಸಹಾಸ ಪಟ್ಟಿದ್ದಾರೆ.
ಚಾರ್ಮಾಡಿ ಘಾಟ್ ನಲ್ಲಿ ಬೆಳಿಗ್ಗೆಯಿಂದ ಮಳೆ ಸುರಿಯುತ್ತಿದ್ದು, ಟ್ರಾಫಿಕ್ ಜಾಮ್ ನಿಂದ ಪ್ರವಾಸಿಗರ ಪರದಾಟ ಅನುಭವಿಸಿದ್ದಾರೆ.