ಇರಾನ್ ಅಧ್ಯಕ್ಷ ಮೃತ್ಯು: ಸಂತಾಪ ವ್ಯಕ್ತಪಡಿಸಿದ ಪ್ರಧಾನಿ ಮೋದಿ

Prasthutha|

ಹೊಸದಿಲ್ಲಿ: ಹೆಲಿಕಾಪ್ಟರ್ ದುರಂತದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರಯೀಸಿ ನಿಧನಕ್ಕೆ ಪ್ರಧಾನಿ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

- Advertisement -


ಇರಾನ್ ಅಧ್ಯಕ್ಷ ಡಾ. ಸಯೀದ್ ಇಬ್ರಾಹಿಂ ರಯೀಸಿ, ಅವರ ದುರಂತ ಅಂತ್ಯದಿಂದ ತೀವ್ರ ದುಃಖ ಮತ್ತು ಆಘಾತವಾಗಿದೆ. ಭಾರತ-ಇರಾನ್ ದ್ವಿಪಕ್ಷೀಯ ಸಂಬಂಧ ಬಲಪಡಿಸುವಲ್ಲಿ ಅವರ ಕೊಡುಗೆ ಸದಾ ಸ್ಮರಣೀಯವಾಗಿದೆ. ಅವರ ಕುಟುಂಬ ಮತ್ತು ಇರಾನ್ ಜನತೆಗೆ ನನ್ನ ಸಂತಾಪಗಳು. ಈ ದುಃಖದ ಸಮಯದಲ್ಲಿ ಭಾರತವು ಇರಾನ್ ಜೊತೆಗಿದೆ ಎಂದು ಅವರು ಹೇಳಿದ್ದಾರೆ.



Join Whatsapp