ಬೆಂಗಳೂರು: ಕರ್ನಾಟಕದ ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ದಂತ ವೈದ್ಯಕೀಯ ಕಾಲೇಜುಗಳ ಒಕ್ಕೂಟ (COMEDK) 2024ರ ಪದವಿಪೂರ್ವ ಪ್ರವೇಶ ಪರೀಕ್ಷೆಯ ಫಲಿತಾಂಶ ಇಂದು ಮಧ್ಯಾಹ್ನ 2 ಗಂಟೆಗೆ ಬಿಡುಗಡೆ ಮಾಡಲಿದೆ. COMEDK UGET 2024 ರ ಅಭ್ಯರ್ಥಿಗಳು ತಮ್ಮ ಫಲಿತಾಂಶಗಳನ್ನು ಅಧಿಕೃತ ವೆಬ್‌ಸೈಟ್ comedk.org ನಲ್ಲಿ ಪರಿಶೀಲಿಸಬಹುದಾಗಿದೆ. ಡೌನ್‌ಲೋಡ್ ಕೂಡ ಮಾಡಬಹುದಾಗಿದೆ.
ಕರ್ನಾಟಕದ 150 ಪ್ರೈವೇಟ್ ಎಂಜಿನಿಯರಿಂಗ್ ಕಾಲೇಜು, ದೇಶದ ಕೆಲವು ಕಡೆ ಇರುವ 40 ಖಾಸಗಿ ವಿವಿಗಳಲ್ಲಿನ ಸುಮಾರು 22 ಸಾವಿರ ಎಂಜಿನಿಯರಿಂಗ್ ಸೀಟುಗಳ ಪ್ರವೇಶಾತಿಗಾಗಿ ಈ ಅರ್ಹತಾ ಪರೀಕ್ಷೆಯನ್ನು ನಡೆಸಲಾಗಿತ್ತು. ದೇಶದ 1,03,799 (ಶೇಕಡಾ 87.96) ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು, ಇಂದು ಅವರ ಭವಿಷ್ಯ ನಿರ್ಧಾರ ಆಗಲಿದೆ.
ಕಾಮೆಡ್ – ಕೆ ಪರೀಕ್ಷೆಯನ್ನು ದೇಶಾದ್ಯಂತ ನಡೆಸಲಾಗಿದ್ದು, 200ಕ್ಕೂ ಹೆಚ್ಚು ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಪ್ರತಿ ವರ್ಷ ಮೇ ತಿಂಗಳಲ್ಲಿ ನಡೆಯುವ ಈ ಪ್ರವೇಶ ಪರೀಕ್ಷೆಯು ಪದವಿ ಪೂರ್ವ ಮೆಡಿಕಲ್, ಎಂಜಿನಿಯರಿಂಗ್, ಡೆಂಟಲ್ ಕೋರ್ಸ್‌ಗಳ ಪ್ರವೇಶಕ್ಕೆ ಬುನಾದಿಯಾಗಲಿದೆ.