ಮಂಗಳೂರು | ಶಾಸಕ ಹರೀಶ್ ಪೂಂಜಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

Prasthutha|

ಮಂಗಳೂರು: ಶಾಸಕ ಹರೀಶ್ ಪೂಂಜಾ ಠಾಣೆಯಲ್ಲೇ ಪ್ರತಿಭಟನೆ ನಡೆಸಿ ಪೊಲೀಸರಿಗೆ ಧಮ್ಕಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಾಸಕನಾದ್ರೆ ಪೊಲೀಸರ ಜೊತೆ ಗಲಾಟೆ ಮಾಡಬಹುದಾ ಎಂದು ಕಿಡಿಕಾರಿದ್ದಾರೆ.

- Advertisement -

ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಶಾಸಕ ಹರೀಶ್ ಪೂಂಜಾ ವಿರುದ್ಧ ಎರಡು ಎಫ್ ಐಆರ್ ದಾಖಲಾಗಿದೆ. ಈ ಪ್ರಕರಣದಲ್ಲಿ ಕಾಂಗ್ರೆಸ್ ನ ಒತ್ತಡ ಅಂದರೆ ಎನು ಅರ್ಥ?, ಕಾನೂನು ಎಲ್ಲರಿಗೂ ಒಂದೇ. ಇದು ಜಾಮೀನು ಪ್ರಕರಣ ಅಲ್ಲ, ಈ ಕೇಸ್ನಲ್ಲಿ 7 ವರ್ಷ ಜೈಲು ವಾಸ ಇದೆ. ಆತ ಎಂಎಲ್ಎ ಎಂದು ಬಿಟ್ಟು ಬಿಡೋಕೆ ಆಗುತ್ತಾ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.



Join Whatsapp