ಗುಜರಾತ್: ಗೇಮ್ ಝೋನ್‌ನಲ್ಲಿ ಭಾರೀ ಬೆಂಕಿಯಿಂದ 24 ಮಂದಿ ಸಜೀವ ದಹನ

Prasthutha|

ಗುಜರಾತ್‌: ರಾಜ್‌ಕೋಟ್‌ನಲ್ಲಿ ಟಿಆರ್‌ಪಿ ಗೇಮ್ ಝೋನ್‌ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, 24 ಮಂದಿ ಸಜೀವ ದಹನಗೊಂಡಿದ್ದಾರೆ. ಇಡೀ ಗೇಮ್ ಝೋನ್ ಸುಟ್ಟು ಬೂದಿಯಾಗಿದೆ.

- Advertisement -

ಗೇಮಿಂಗ್ ವಲಯದ ಮಾಲೀಕ ಯುವರಾಜ್ ಸಿಂಗ್ ಸೋಲಂಕಿ ವಿರುದ್ಧ ನಿರ್ಲಕ್ಷ್ಯ ಕುರಿತಂತೆ ಪ್ರಕರಣ ದಾಖಲಿಸಿ, ಅವರನ್ನು ರಾಜ್‌ಕೋಟ್ ಪೊಲೀಸರು ಬಂಧಿಸಿದ್ದಾರೆ. ಗೇಮ್ ಝೋನ್‌ನ ಮ್ಯಾನೇಜರ್‌ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಈ ಆಟದ ವಲಯದ ಒಂದು ಭಾಗದಲ್ಲಿ ನವೀಕರಣ ಕಾರ್ಯ ನಡೆಯುತ್ತಿತ್ತು ಎಂದು ತಿಳಿದು ಬಂದಿದೆ. ಈ ವೇಳೆ ಎರಡು ದಿನಗಳ ಹಿಂದೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಗೇಮ್ ಝೋನ್ ಬಂದ್ ಆಗಿತ್ತು. ಒಂದು ದಿನದ ನಂತರ ಆಟದ ವಲಯವನ್ನು ಪುನಃ ತೆರೆಯಲಾಗಿದೆ ಎಂದು ತಿಳಿದುಬಂದಿದೆ. ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡ ನಂತರ ಹೆಚ್ಚಿನ ತನಿಖೆ ನಡೆಯಲಿದೆ.

- Advertisement -

ಬೆಂಕಿಯ ಹೊಗೆ 3 ಕಿಲೋಮೀಟರ್ ದೂರದಿಂದ ಗೋಚರಿಸಿದೆ. ಬೆಂಕಿ ಹೊತ್ತಿಕೊಳ್ಳಲು ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಕಟ್ಟಡ ಕುಸಿದಿರುವುದರಿಂದ ಪರಿಹಾರ ಕಾರ್ಯದಲ್ಲಿ ತೊಂದರೆಯಾಗುತ್ತಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿ ತಿಳಿಸಿದ್ದಾರೆ.



Join Whatsapp