ಸಂವಿಧಾನದ ಪೀಠಿಕೆಯಲ್ಲಿ ಬದಲಾವಣೆ ಇಂದಿರಾ ಗಾಂಧಿ ಮಾಡಿದರು, ಬಿಜೆಪಿ ಎಂದಿಗೂ ಹಾಗೆ ಮಾಡಲ್ಲ: ರಾಜನಾಥ್ ಸಿಂಗ್

Prasthutha|

ನವದೆಹಲಿ: 1976ರಲ್ಲಿ ಮೊದಲ ಬಾರಿಗೆ ಭಾರತೀಯ ಸಂವಿಧಾನದ ಪೀಠಿಕೆಯಲ್ಲಿ ಬದಲಾವಣೆ ಇಂದಿರಾ ಗಾಂಧಿ ಮಾಡಿದರು ಎಂದು ಕೇಂದ್ರ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

- Advertisement -

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಹರಿದು ಎಸೆಯುತ್ತದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿಕೆ ನೀಡಿದ ನಂತರ ರಾಜನಾಥ್ ಸಿಂಗ್ ಈ ಹೇಳಿಕೆ ನೀಡಿದ್ದಾರೆ.

ನಮ್ಮ ಸಂವಿಧಾನ ಸಭೆಯು ಅಗತ್ಯಕ್ಕೆ ಅನುಗುಣವಾಗಿ ಸಂವಿಧಾನಕ್ಕೆ ತಿದ್ದುಪಡಿಗಳನ್ನು ಮಾಡಬಹುದು ಎಂದು ಒಮ್ಮತದ ಅಭಿಪ್ರಾಯವನ್ನು ಹೊಂದಿತ್ತು. ಕಾಂಗ್ರೆಸ್ ಮತ್ತು ಇತರ ರಾಜಕೀಯ ಪಕ್ಷಗಳು ಇದನ್ನು ಸಾಕಷ್ಟು ಮಾಡಿವೆ. ಆದರೆ ಪೀಠಿಕೆಯಲ್ಲಿ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ. ಆದರೆ ಅವರು ಅದನ್ನು ಮಾಡಿದರು. ಈಗ ನಮ್ಮನ್ನು ದೂಷಿಸಲು ಪ್ರಯತ್ನಿಸುತ್ತಿದ್ದಾರೆ. ಬಿಜೆಪಿ ಸಂವಿಧಾನ ಬದಲಾವಣೆ ಬಗ್ಗೆ ಯೋಚಿಸುವುದೇ ಇಲ್ಲ ಎಂದು ಅವರು ಹೇಳಿದ್ದಾರೆ.

- Advertisement -

ಸಂವಿಧಾನದ ಪೀಠಿಕೆಯಿಂದ “ಜಾತ್ಯತೀತತೆ” ಎಂಬ ಪದವನ್ನು ಬಿಜೆಪಿ ಕೈಬಿಡಬಹುದು ಎಂದು ಇತರ ಕೆಲವು ಕಾಂಗ್ರೆಸ್ ಕಾರ್ಯಕರ್ತರು ಆತಂಕ ವ್ಯಕ್ತಪಡಿಸಿದ್ದರು.

ಜಾತಿ ಆಧಾರಿತ ಮೀಸಲಾತಿಯನ್ನು ಕೊನೆಗೊಳಿಸುವ ಯಾವುದೇ ಯೋಜನೆಯನ್ನು ಆಡಳಿತ ಪಕ್ಷ ಹೊಂದಿಲ್ಲ, ಆದರೆ ಧರ್ಮದ ಆಧಾರದ ಮೇಲೆ ಎಂದಿಗೂ ಮೀಸಲಾತಿ ನೀಡುವುದಿಲ್ಲ ಎಂದು ಸಿಂಗ್ ಹೇಳಿದರು.



Join Whatsapp