ಮುಂಬೈ: ತಾಜ್ ಹೋಟೆಲ್ ಹಾಗೂ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

Prasthutha|

ಮುಂಬೈ: ಪ್ರಸಿದ್ಧ ತಾಜ್ ಹೋಟೆಲ್ ಹಾಗೂ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಡಲಾಗಿದೆ ಎಂದು ಮುಂಬೈ ಪೊಲೀಸ್‌ ಕಂಟ್ರೋಲ್‌ ರೂಂಗೆ ಬೆದರಿಕೆ ಕರೆಗಳು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಹೋಟೆಲ್ ಹಾಗೂ ವಿಮಾನ ನಿಲ್ದಾಣದಲ್ಲಿ ಬಾಂಬ್‌ಗಳನ್ನು ಇರಿಸಲಾಗಿವೆ. ಅವುಗಳನ್ನು ಸ್ಫೋಟಿಸುವುದಾಗಿ ಮುಂಬೈ ಪೊಲೀಸ್ ಕಂಟ್ರೋಲ್ ರೂಮಗೆ ಕರೆಗಳು ಬಂದಿವೆ.

ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ತಾಜ್ ಹೋಟೆಲ್ ಹಾಗೂ ವಿಮಾನ ನಿಲ್ದಾಣದಲ್ಲಿ ಶೋಧ ನಡೆಸಿದ್ದಾರೆ. ಆದರೆ ಯಾವುದೇ ಅನುಮಾನಾಸ್ಪದ ವಸ್ತುಗಳು ಕಂಡುಬಂದಿಲ್ಲ. ಮೇಲ್ನೋಟಕ್ಕೆ ಇದು ಹುಸಿ ಬಾಂಬ್ ಕರೆಗಳಾಗಿರುವ ಸಾಧ್ಯತೆ ಇದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಆದರೂ ಶೋಧ ಕಾರ್ಯ ಮುಂದುವರೆದಿದೆ.



Join Whatsapp