ರಸ್ತೆಗಳಲ್ಲಿ ನಮಾಝ್ ಮಾಡುವುದನ್ನು ನಿಲ್ಲಿಸಿ, ಇಲ್ಲದಿದ್ದರೆ ಸಾಮೂಹಿಕ ಹನುಮಾನ್ ಚಾಲೀಸಾ ಪಠಣ: ಶರಣ್ ಪಂಪ್’ವೆಲ್

Prasthutha|

ಮಂಗಳೂರು: ರಸ್ತೆಗಳಲ್ಲಿ ನಮಾಝ್ ಮಾಡುವುದನ್ನು ನಿಲ್ಲಿಸಿ ಇಲ್ಲದಿದ್ದರೆ ಸಾಮೂಹಿಕ ಹನುಮಾನ್ ಚಾಲೀಸಾ ಪಠಣದ ಮೂಲಕ ತಡೆಯುತ್ತೇವೆ ಎಂದು ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಹೇಳಿದ್ದಾರೆ.

- Advertisement -


ಕೆಲವು ಕಡೆ ರಸ್ತೆ ಮತ್ತು ಸಾರ್ವಜನಿಕ ಜಾಗದಲ್ಲಿ ನಮಾಝ್ ಮಾಡುತ್ತಿರುವ ಘಟನೆಗಳು ನಡೆಯುತ್ತಿರುವುದು ಜಿಲ್ಲೆಯಲ್ಲಿ ಅಶಾಂತಿ ನಿರ್ಮಿಸಲು ಸಂಚು ರೂಪಿಸುತ್ತಿದ್ದಾರೆ. ತಕ್ಷಣ ಜಿಲ್ಲಾಡಳಿತ ಇವರ ವಿರುದ್ದ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸುತ್ತೇವೆ. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆ ಮರುಕಳಿಸಿದರೆ ಅದೇ ಸ್ಥಳದಲ್ಲಿ ಸಾಮೂಹಿಕ ಹನುಮಾನ್ ಚಾಲೀಸಾ ಪಠಣ ಮಾಡುವುದರ ಮೂಲಕ ತಡೆಯುತ್ತೇವೆ ಎಂದು ಹೇಳಿದ್ದಾರೆ.



Join Whatsapp