ಪ್ರಜ್ವಲ್ ರೇವಣ್ಣ ವಿಮಾನದಿಂದ ಇಳಿಯುತ್ತಿದ್ದಂತೆಯೇ ವಶಕ್ಕೆ ಪಡೆದ ಎಸ್‌ಐಟಿ ಅಧಿಕಾರಿಗಳು

Prasthutha|

ಬೆಂಗಳೂರು: ಲೈಂಗಿಕ ಹಗರಣದ ಆರೋಪಿಯಾಗಿರುವ ಪ್ರಜ್ವಲ್‌ ರೇವಣ್ಣ ಜರ್ಮನಿಯಿಂದ ಬಂದು ವಿಮಾನದಿಂದ ಇಳಿಯುತ್ತಿದ್ದಂತೆಯೇ ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

- Advertisement -

ವಿಮಾನ ನಿಲ್ದಾಣದಲ್ಲಿ ಜರ್ಮನಿಯ ಮ್ಯೂನಿಕ್ ನಗರದಿಂದ ಆಗಮಿಸಿದ್ದ ಪ್ರಜ್ವಲ್ ಬಂದಿದ್ದ ಲುಫ್ತಾನ್ಸಾ ವಿಮಾನ ಲ್ಯಾಂಡ್ ನಡುರಾತ್ರಿ ಆಗುತ್ತಿದ್ದಂತೆ ಸಿಐಎಸ್ ಎಫ್ ಅಧಿಕಾರಿಗಳು ವಶಕ್ಕೆ ಪಡೆದು ಇಮಿಗ್ರೇಷನ್ ಗೆ ಕರೆತಂದಿದ್ದು ಪರಿಶೀಲನೆ ಮತ್ತು ರಾಜತಾಂತ್ರಿಕ ಪಾಸ್ ಪೋರ್ಟ್ ಹೊಂದಿದ್ದ ಕಾರಣ ಲೋಕಸಭಾ ಸ್ಪೀಕರ್ ಗೆ ಮಾಹಿತಿ ನೀಡಿದ ಎಸ್ ಐಟಿ ಅಧಿಕಾರಿಗಳು ವಶಕ್ಕೆ ಪಡೆದು ಕಚೇರಿಗೆ ಕರೆದೊಯ್ದಿದ್ದಾರೆ.

ಪ್ರಜ್ವಲ್ ರೇವಣ್ಣ ಆಗಮನಕ್ಕಾಗಿ ಕಾಯುತ್ತಿದ್ದ ಎಸ್‌ಐಟಿ ಅಧಿಕಾರಿಗಳು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದರು. ಎಸ್‌ಐಟಿ ಕಚೇರಿಯಲ್ಲೂ ಹೆಚ್ಚುವರಿ ಪೊಲೀಸರನ್ನೂ ನಿಯೋಜಿಸಲಾಗಿತ್ತು.

- Advertisement -

ಲೋಕಸಭಾ ಚುನಾವಣೆಯ ದಿನ (ಎ.26)ದಂದು ಮತ ಚಲಾಯಿಸಿ ಎ.27ರ ಬೆಳಗ್ಗೆ ವಿದೇಶಕ್ಕೆ ಪ್ರಯಾಣ ಬೆಳೆಸಿದ್ದ ಸಂಸದ ಪ್ರಜ್ವಲ್ ರೇವಣ್ಣ 34 ದಿನಗಳ ಬಳಿಕ ರಾಜ್ಯಕ್ಕೆ ವಾಪಸ್ಸಾಗಿದ್ದಾರೆ.

ಪ್ರಜ್ವಲ್‍ರನ್ನು ವಿಮಾನ ನಿಲ್ದಾಣದಿಂದ ಭದ್ರತಾ ಸಮಸ್ಯೆಯಾಗದಂತೆ ಕರೆತರುವ ನಿಟ್ಟಿನಲ್ಲಿ ಮುಂಜಾಗ್ರತಾ ದೃಷ್ಟಿಯಿಂದ ಎಸ್‍ಐಟಿ ಮುಖ್ಯಸ್ಥ ಬಿ.ಕೆ.ಸಿಂಗ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಸಭೆ ನಡೆಸಿದ್ದರು.



Join Whatsapp