ಬೆಂಗಳೂರು: ರಾಜ್ಯ ಸಾರಿಗೆ ಇಲಾಖೆ ಏಪ್ರಿಲ್ 2019ಕ್ಕಿಂತ ಮೊದಲು ನೋಂದಣಿಯಾದ ವಾಹನಗಳು ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿಕೊಳ್ಳಬೇಕು ಎಂದು ಆದೇಶ ಹೊರಡಿಸಿದೆ.
ಇಂದು ಮಧ್ಯರಾತ್ರಿ 12 ರವರೆಗೆ ಗಡುವು ನೀಡಲಾಗಿತ್ತು, ಆದರೆ ಎರಡ್ಮೂರು ಬಾರಿ ಗಡುವು ವಿಸ್ತರಣೆ ಮಾಡಿದರೂ ಸಹ ನಂಬರ್ ಪ್ಲೇಟ್ ಅಳವಡಿಕೆ ಕಡಿಮೆ ಪ್ರಮಾಣದಲ್ಲಿ ಆಗಿದೆ.
ಈ ಹಿನ್ನೆಲೆ ಹೈಕೋರ್ಟ್ ಜೂನ್ 12 ರ ವರೆಗೆ ಹೆಚ್ ಎಸ್ ಆರ್ ಪಿ ಅಳವಡಿಸದ ವಾಹನ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುವಂತಿಲ್ಲ 12 ರ ವರೆಗೆ ಅವಕಾಶ ನೀಡಬೇಕೆಂದು ಸೂಚನೆ ನೀಡಿದೆ. ಹೈಕೋರ್ಟ್ ಕೊಟ್ಟ ಗಡುವು ಮುಗಿದ ನಂತರವೂ ಅಳವಡಿಸಿಕೊಂಡಿಲ್ಲ ಎಂದರೆ ಮೊದಲ ಬಾರಿ 500 ರುಪಾಯಿ ಎರಡನೇ ಬಾರಿ 1 ಸಾವಿರ ಮೂರನೇ ಬಾರಿ ಗಾಡಿ ಸೀಜ್ ಮಾಡ್ತಿವಿ ಎಂದು ರಾಜ್ಯ ಸಾರಿಗೆ ಇಲಾಖೆ ಅಡಿಷನಲ್ ಕಮೀಷನರ್ ಮಲ್ಲಿಕಾರ್ಜುನ್ ಎಚ್ಚರಿಕೆ ನೀಡಿದ್ದಾರೆ.