ಗ್ಯಾಂಗ್ಟಕ್: ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ(ಎಸ್ ಕೆಎಂ) ಪಕ್ಷದ ಶಾಸಕಾಂಗ ಪಕ್ಷದ ನಾಯಕರಾಗಿ ಪ್ರೇಮ್ ಸಿಂಗ್ ತಮಾಂಗ್ ಆಯ್ಕೆಯಾಗಿದ್ದು, ಅವರು ಮತ್ತೊಮ್ಮೆ ಮುಖ್ಯಮಂತ್ರಿಯಾಗುವುದು ದೃಢಪಟ್ಟಿದೆ.
ಭಾನುವಾರ ರಾತ್ರಿ ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಹೊಸದಾಗಿ ಆಯ್ಕೆಯಾಗಿರುವ ಪಕ್ಷದ ಎಲ್ಲ 31 ಶಾಸಕರು ಉಪಸ್ಥಿತರಿದ್ದರು. ಸಭೆಯಲ್ಲಿ ಎಸ್ಕೆಎಂನ ಪ್ರಧಾನ ಕಾರ್ಯದರ್ಶಿ ಅರುಣ್ ಉಪ್ರೇಟಿ ಅವರು ತಮಾಂಗ್ ಹೆಸರನ್ನು ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಪ್ರಸ್ತಾಪಿಸಿದರು. ಬಳಿಕ, ಅವಿರೋಧವಾಗಿ ತಮಾಂಗ್ ಆಯ್ಕೆ ನಡೆಯಿತು.