ಐಎಎಸ್ ಅಧಿಕಾರಿಗಳ ಪುತ್ರಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ

Prasthutha|

ಮುಂಬೈ: ಐಎಎಸ್ ಅಧಿಕಾರಿಗಳ ಪುತ್ರಿಯೊಬ್ಬಳು ಸೋಮವಾರ ಮುಂಜಾನೆ ಮುಂಬೈನ ಬಹುಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಮಹಾರಾಷ್ಟ್ರ ಕೇಡರ್ IAS ಅಧಿಕಾರಿಗಳಾದ ರಾಧಿಕಾ ಮತ್ತು ವಿಕಾಸ್ ರಸ್ತೋಗಿ ಅವರ ಪುತ್ರಿ ಲಿಪಿ ರಸ್ತೋಗಿ (27) ಆತ್ಮಹತ್ಯೆಗೆ ಶರಣಾದ ಯುವತಿ.
ಕೂಡಲೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಿಸದೇ ಆಕೆ ಮೃತಪಟ್ಟಿದ್ದಾಳೆ.

ಕಾನೂನು ವಿದ್ಯಾರ್ಥಿನಿಯಾಗಿದ್ದ ಲಿಪಿ, ಇಂದು ಮುಂಜಾನೆ 4 ಗಂಟೆ ಸುಮಾರಿಗೆ ರಾಜ್ಯ ಸಚಿವಾಲಯದ ಬಳಿಯ ಕಟ್ಟಡದ 10ನೇ ಮಹಡಿಯಿಂದ ಜಿಗಿದಿದ್ದಾರೆ. ಆಕೆಯ ಕೋಣೆಯಲ್ಲಿ ಡೆತ್ ನೋಟ್ ಒಂದು ಸಿಕ್ಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.



Join Whatsapp