ಲೋಕಸಭಾ ಚುನಾವಣೆ 2024: ಈವರೆಗಿನ ಅಪ್ಡೇಟ್ಸ್

Prasthutha|

ರಾಜ್ಯದ 28 ಕ್ಷೇತ್ರಗಳೂ ಸೇರಿ ದೇಶದ 542 ಕ್ಷೇತ್ರಗಳಲ್ಲಿ ಕಣಕ್ಕಿಳಿದಿದ್ದ 8,360 ಅಭ್ಯರ್ಥಿಗಳ ಭವಿಷ್ಯ ಸಂಜೆ ವೇಳೆಗೆ ನಿರ್ಧಾರವಾಗಲಿದೆ. ಬೆಳಿಗ್ಗೆ 8ಕ್ಕೆ ಮತ ಎಣಿಕೆ ಆರಂಭವಾಗಿದೆ.

- Advertisement -

ಆರಂಭಿಕ ಹಂತ: ರಾಹುಲ್‌ಗೆ ಮುನ್ನಡೆ

ಆರಂಭಿಕ ಹಂತದ ಮತ ಎಣಿಕೆಯಲ್ಲಿ ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟ ಮುನ್ನಡೆ ಕಾಯ್ದುಕೊಂಡಿದೆ. ಎನ್‌ಡಿಎ ಅಭ್ಯರ್ಥಿಗಳು 323 ಕ್ಷೇತ್ರಗಳಲ್ಲಿ ಹಾಗೂ ಇಂಡಿಯಾ ಬಣದ ಅಭ್ಯರ್ಥಿಗಳು 138 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದಾರೆ.

- Advertisement -

ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ವಾರಾಣಸಿಯಲ್ಲಿ ಹಿನ್ನಡೆಯಲ್ಲಿದ್ದಾರೆ.ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಕನೌಜ್‌ನಲ್ಲಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಗುಜರಾತ್‌ನ ಗಾಂಧಿನಗರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಎರಡೂ ಕ್ಷೇತ್ರಗಳಲ್ಲಿ (ಕೇರಳದ ವಯನಾಡ್‌ ಮತ್ತು ಉತ್ತರ ಪ್ರದೇಶದ ರಾಯಬರೇಲಿಯಲ್ಲಿ) ಮುನ್ನಡೆ ಗಳಿಸಿದ್ದಾರೆ.

ಹಾಸನದಲ್ಲಿ ಪ್ರಜ್ವಲ್‌ ಸೋಲುವ ಸಾಧ್ಯತೆ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಆರಂಭಿಕ ಹಿನ್ನಡೆಯಾಗಿದೆ.

ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್‌ ಪಟೇಲ್‌ ಮುನ್ನಡೆಯಲ್ಲಿದ್ದಾರೆ.

ಗುಜರಾತ್‌ನಲ್ಲಿ ಬಿಜೆಪಿ ನಾಗಾಲೋಟ

26 ಲೋಕಸಭಾ ಕ್ಷೇತ್ರಗಳಿರುವ ಗುಜರಾತ್‌ನಲ್ಲಿ ಬಿಜೆಪಿ ಭಾರಿ ಮುನ್ನಡೆ ಸಾಧಿಸಿದೆ. ಇಲ್ಲಿನ ಒಂದು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಳಿದ 25ರಲ್ಲಿ 20 ಕಡೆ ಮುನ್ನಡೆ ಕಾಯ್ದುಕೊಂಡಿದೆ.ಐದು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮುನ್ನಡೆ ಸಾಧಿಸಿದೆ.

ಮಹಾರಾಷ್ಟ್ರದಲ್ಲೂ ಬಿಜೆಪಿ ಮೇಲುಗೈ

ಮಹಾರಾಷ್ಟ್ರ ಮೈತ್ರಿ ಸರ್ಕಾರದ ಭಾಗವಾಗಿರುವ ಬಿಜೆಪಿ, ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಸಿಎಂ ಏಕನಾಥ ಶಿಂದೆ ನೇತೃತ್ವದ ಶಿವಸೇನಾ 5 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಬಿಜೆಪಿ 17 ಕಡೆ ಮುಂದೆ ಇದೆ. ಮೈತ್ರಿ ಸರ್ಕಾರದ ಭಾಗವಾಗಿರುವ ಎನ್‌ಸಿಪಿ (ಅಜಿತ್‌ ಪವಾರ್‌ ಬಣ) 1 ಸ್ಥಾನದಲ್ಲಿ ಮುನ್ನಡೆ ಸಾಧಿಸಿದೆ.

ಮಹಾ ವಿಕಾಸ ಆಘಾಡಿ ಮೈತ್ರಿಕೂಟದಲ್ಲಿರುವ ಉದ್ಧವ್‌ ಠಾಕ್ರೆ ಬಣದ ಶಿವಸೇನಾ 10 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಉಳಿದಂತೆ, ಕಾಂಗ್ರೆಸ್‌ 7, ಎನ್‌ಸಿಬಿ (ಶರದ್‌ ಪವಾರ್ ಬಣ) 2 ಕಡೆ ಮುನ್ನಡೆ ಹೊಂದಿದೆ.

ಸಿಕ್ಕಿಂನಲ್ಲಿ ಎಸ್‌ಕೆಎಂ ಮುನ್ನಡೆ

ಸಿಕ್ಕಿಂನಲ್ಲಿರುವ ಏಕೈಕ ಲೋಕಸಭಾ ಕ್ಷೇತ್ರದಲ್ಲಿ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ಮುನ್ನಡೆ ಸಾಧಿಸಿದೆ.

ಇಲ್ಲಿನ ವಿಧಾನಸಭಾ ಚುನಾವಣೆ ಫಲಿತಾಂಶ ಮೊನ್ನೆಯಷ್ಟೇ (ಜೂ. 2) ಪ್ರಕಟವಾಗಿದೆ. 32 ಕ್ಷೇತ್ರಗಳ ಪೈಕಿ 31ರಲ್ಲಿ ಗೆದ್ದು ಅಧಿಕಾರಕ್ಕೇರಿದೆ.

ದಕ್ಷಿಣ ಕನ್ನಡದಲ್ಲಿ ಬಿಜೆಪಿಯ ಬ್ರಿಜೇಶ್ ಚೌಟ, ಬೆಂಗಳೂರುನಲ್ಲಿ ಕಾಂಗ್ರೆಸ್‌ನ ಡಿಕೆ ಸುರೇಶ್, ಕೊಡಗು- ಮೈಸೂರು ಕ್ಷೇತ್ರದಲ್ಲಿ ಬಿಜೆಪಿಯ ಯದುವೀರ್ ಮುನ್ನಡೆಯಲ್ಲಿದ್ದಾರೆ.



Join Whatsapp