ಅಯೋಧ್ಯೆಯಲ್ಲಿ BJPಗೆ ಬಿಗ್‌ ಶಾಕ್..!

Prasthutha|

ಅಯೋಧ್ಯೆ: ಉತ್ತರ ಪ್ರದೇಶದ ಉತ್ತರ ಪ್ರದೇಶದ ಫೈಜಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಭಾರೀ ಹಿನ್ನಡೆ ಉಂಟಾಗಿದ್ದು, ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಲಲ್ಲು ಸಿಂಗ್ ಅವರು ಇಂಡಿಯಾ ಒಕ್ಕೂಟದ ಅಭ್ಯರ್ಥಿ ಅವಧೇಶ್ ಪ್ರಸಾದ್ ಮುಂದೆ ಸೋಲಿನತ್ತ ಮುಖ ಮಾಡಿದ್ದಾರೆ.

- Advertisement -

ಆರಂಭದಿಂದಲೂ ಅಯೋಧ್ಯೆಯಲ್ಲಿ ಬಿಜೆಪಿಗೆ ಭಾರೀ ಹಿನ್ನಡೆಯುಂಟಾಗುತ್ತಾ ಬಂದಿದ್ದು, ಇದೀಗ ಬಿಜೆಪಿ ಹೀನಾಯ ಸೋಲು ಎದುರಿಸುವ ಸಾಧ್ಯತೆ ಕಂಡುಬರುತ್ತಿದೆ.

ಇಂಡಿಯಾ ಒಕ್ಕೂಟದ, ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷದ ಅಭ್ಯರ್ಥಿ ಅವಧೇಶ್ ಪ್ರಸಾದ್ ಅವರಿಗಿಂತ ಲಲ್ಲು ಸಿಂಗ್ ಭಾರೀ ಮತಗಳ ಅಂತರದಿಂದ ಹಿನ್ನಡೆಯಲ್ಲಿದ್ದಾರೆ‌.

- Advertisement -

ಬಿಜೆಪಿ ನಾಯಕರು ಅಯೋಧ್ಯೆಯಲ್ಲಿ ರಾಮಮಂದಿರದ ಉಳಿವಿನ ಬಗ್ಗೆ ಚುನಾವಣೆಯ ಭಾಷಣದಲ್ಲಿ ಪ್ರಸ್ತಾಪ ಮಾಡಿದ ನಂತರವೂ ಬಿಜೆಪಿ ತೀವ್ರ ಹಿನ್ನಡೆಯನ್ನು ಎದುರಿಸುತ್ತಿದೆ.



Join Whatsapp