ನವದೆಹಲಿ: ಇಲ್ಲಿ ಸರ್ಕಾರ ರಚನೆ ಸಂಬಂಧ ಚರ್ಚೆಗಾಗಿ ಇಂದು ಎನ್‌ಡಿಎ ನಾಯಕರ ಸಭೆ ಸೇರಿದ್ದು, ನರೇಂದ್ರ ಮೋದಿ ಅವರನ್ನು ತಮ್ಮ ನಾಯಕನನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಸಭೆಯಲ್ಲಿ ಎಲ್ಲ ನಾಯಕರು ಮೋದಿ ಅವರನ್ನೇ ಪ್ರಧಾನಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ್ದಾರೆ.
ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬಿಹಾರ ಸಿಎಂ ನಿತೀಶ್ ಕುಮಾರ್, ಟಿಡಿಪಿ ಅಧ್ಯಕ್ಷ ಎನ್ ಚಂದ್ರಬಾಬು ನಾಯ್ಡು, ಜೆಡಿಯು ನಾಯಕ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಶಿವಸೇನಾ ನಾಯಕ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಎಲ್‌ಜೆಪಿ (ರಾಮ್ ವಿಲಾಸ್) ನಾಯಕ ಚಿರಾಗ್ ಪಾಸ್ವಾನ್ ಸೇರಿದಂತೆ ಎಲ್ಲ ಎನ್‌ಡಿಎ ನಾಯಕರು ಭಾಗವಹಿಸಿದ್ದರು.
ಆಡಳಿತಾರೂಢ ಸಮ್ಮಿಶ್ರ ಸರ್ಕಾರ ಬಹುಮತ ಗಳಿಸಿದ ಒಂದು ದಿನದ ನಂತರ ಈ ಸಭೆ ನಡೆದಿದ್ದು, ಇದು ಪ್ರಧಾನಿ ನರೇಂದ್ರ ಮೋದಿ ಅವರ ಮೂರನೇ ಅವಧಿಗೆ ದಾರಿ ಮಾಡಿಕೊಟ್ಟಿದೆ.