ಆಂಧ್ರದಲ್ಲಿ ಮುಸ್ಲಿಂ ಮೀಸಲಾತಿ ಮುಂದುವರಿಕೆ: ತೆಲುಗು ದೇಶಂ ಪಕ್ಷ

Prasthutha|

ನವದೆಹಲಿ: ಆಂಧ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಿರುವ ಮೀಸಲಾತಿಯನ್ನು ಮುಂದುವರಿಸುವುದಾಗಿ ತೆಲುಗು ದೇಶಂ ಪಕ್ಷದ(ಟಿಡಿಪಿ) ನಾಯಕ ಆರ್. ರವೀಂದ್ರ ಕುಮಾರ್ ಹೇಳಿದ್ದಾರೆ.

- Advertisement -

ಆಂಧ್ರಪ್ರದೇಶದಲ್ಲಿ ತಮ್ಮ ಪಕ್ಷವು ಮುಸ್ಲಿಂ ಕೋಟಾ ಮೀಸಲಾತಿಯನ್ನು ಮುಂದುವರಿಸಲಿದೆ ಎಂದು ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಭರವಸೆ ನೀಡಿದ ಒಂದು ತಿಂಗಳ ನಂತರ ಕೆ. ರವೀಂದ್ರ ಕುಮಾರ್ ಅವರ ಹೇಳಿಕೆ ಬಂದಿದೆ. ಆದರೆ ಅವರ ಮಿತ್ರ ಪಕ್ಷವು ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡುವುದಿಲ್ಲ ಎಂದು ಪ್ರತಿಪಾದಿಸಿದೆ.

ಮೊದಲಿನಿಂದಲೂ ನಾವು ಮುಸ್ಲಿಮರಿಗೆ ಶೇಕಡಾ ನಾಲ್ಕು ಮೀಸಲಾತಿಯನ್ನು ಬೆಂಬಲಿಸುತ್ತಿದ್ದೇವೆ ಮತ್ತು ಅದು ಮುಂದುವರಿಯುತ್ತದೆ ಎಂದು ಚಂದ್ರಬಾಬು ನಾಯ್ಡು ಮೇ 5 ರಂದು ಹೇಳಿದ್ದರು.

- Advertisement -

ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಪ್ರಧಾನಿ ಮೋದಿ ದಲಿತರು, ಆದಿವಾಸಿಗಳು ಮತ್ತು ಇತರ ಹಿಂದುಳಿದ ವರ್ಗಗಳ(ಒಬಿಸಿ) ಕೋಟಾಗಳನ್ನು ಮುಸ್ಲಿಮರಿಗೆ ಧರ್ಮದ ಆಧಾರದ ಮೇಲೆ ನೀಡಲು ಬಿಡುವುದಿಲ್ಲ ಎಂದು ಹೇಳಿದ್ದರು.



Join Whatsapp