ವಿಕಲಾಂಗ ಚಕ್ರವರ್ತಿಯ ಸಾಮ್ರಾಜ್ಯದಲ್ಲಿ ಎಲ್ಲವೂ ಸರಿಯಿಲ್ಲ: ಪ್ರಕಾಶ್ ರಾಜ್ ವ್ಯಂಗ್ಯ

Prasthutha|

ಬೆಂಗಳೂರು: ವಿಕಲಾಂಗ ಚಕ್ರವರ್ತಿಯ ಸಾಮ್ರಾಜ್ಯದಲ್ಲಿ ಎಲ್ಲವೂ ಸರಿಯಿಲ್ಲ ಎಂದು ಹೇಳುವ ಮೂಲಕ ಚಿತ್ರನಟ ಪ್ರಕಾಶ್ ರಾಜ್ ಅವರು ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರನ್ನು ವ್ಯಂಗ್ಯವಾಡಿದ್ದಾರೆ.

- Advertisement -


ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್ಡಿಎ) ಸಭೆಯಲ್ಲಿ ಹಾಜರಾಗಿದ್ದ ಬಿಜೆಪಿ ನಾಯಕರ ಫೋಟೊವನ್ನು ‘ಎಕ್ಸ್’ನಲ್ಲಿ ಹಂಚಿಕೊಂಡಿರುವ ಪ್ರಕಾಶ್ ರಾಜ್, ‘ವಿಕಲಾಂಗ ಚಕ್ರವರ್ತಿಯ ಸಾಮ್ರಾಜ್ಯದಲ್ಲಿ ಎಲ್ಲವೂ ಸರಿಯಿಲ್ಲ. ಖಚಿತವಾಗಿ ಏನೋ ಪಿತೂರಿ ನಡೆಯುತ್ತಿದೆ. ಎಲ್ಲರಿಗೂ ವಾರಾಂತ್ಯದ ಶುಭಾಶಯಗಳು.. #justasking’ ಎಂದು ಪೋಸ್ಟ್ ಮಾಡಿದ್ದಾರೆ.



Join Whatsapp