ಮಂಗಳೂರು | ಉದ್ದಿಮೆ, ವ್ಯಾಪಾರ, ಸಂಸ್ಥೆಗಳ ನಾಮ ಫಲಕಗಳಲ್ಲಿ ಕನ್ನಡ ಬಳಕೆ ಕಡ್ಡಾಯ

Prasthutha|

ಮಂಗಳೂರು: ನಾಮ ಫಲಕಗಳಲ್ಲಿ ಕನ್ನಡ ಬಳಸದ ಅಂಗಡಿ ಮುಂಗಟ್ಟುಗಳ ವಿರುದ್ಧ ಕಠಿಣ ಕ್ರಮ ಕೈಗೊಂಡು, ಅವುಗಳ ಪರವಾನಗಿ ರದ್ದುಪಡಿಸಲಾಗುವುದು ಎಂದು ಮಂಗಳೂರು ನಗರ ಪಾಲಿಕೆ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

- Advertisement -


ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಉದ್ದಿಮೆದಾರರಿಗೆ ತಮ್ಮ ಉದ್ದಿಮೆ ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಅಗ್ರಸ್ಥಾನದಲ್ಲಿ ಶೇ. 60% ರಷ್ಟು ಪ್ರದರ್ಶಸುವ ನಿಬಂಧನೆಯನ್ನು ವಿಧಿಸಿ ಉದ್ದಿಮೆ ಪರವಾನಿಗೆಯನ್ನು ನೀಡಲಾಗುತ್ತಿದೆ.
ಈ ನಿಟ್ಟಿನಲ್ಲಿ ಉದ್ದಿಮೆ ಪರವಾನಿಗೆ ನವೀಕರಣ ಅಥವಾ ಹೊಸದಾಗಿ ಮಂಜೂರಾತಿ ಸಮಯದಲ್ಲಿ ಈ ಬಗ್ಗೆ ಪರಿಶೀಲಿಸಲಾಗುತ್ತಿದ್ದು. ಸಾಕಷ್ಟು ಉದ್ದಿಮೆದಾರರು ಸರ್ಕಾರದ ನೀತಿಯಂತೆ ಕನ್ನಡ ನಾಮಫಲಕವನ್ನು ಪ್ರದರ್ಶಿಸುತ್ತಿರುವುದು ಕಂಡುಬರುತ್ತಿದೆ.


ಕೆಲವೊಂದು ಉದ್ದಿಮೆದಾರರು ಸದ್ರಿ ಆದೇಶವನ್ನು ಉಲ್ಲಂಘಿಸಿ ಆಂಗ್ಲ ಭಾಷೆಯಲ್ಲಿ ನಾಮಫಲಕಗಳನ್ನು ಅಳವಡಿಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ಬರುತ್ತಿರುವ ದೂರುಗಳನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಆದುದರಿಂದ ಇನ್ನು ಮುಂದೆ ಪಾಲಿಕೆ ವ್ಯಾಪ್ತಿಯ ಎಲ್ಲಾ ಉದ್ದಿಮೆದಾರರು ತಮ್ಮ ಉದ್ದಿಮೆ ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡವನ್ನು ಅಗ್ರಸ್ಥಾನದಲ್ಲಿ ಬಳಕೆ ಮಾಡುವುದನ್ನು ಕಡ್ಡಾಯಗೊಳಿಸಿದೆ.
ತಪ್ಪಿದಲ್ಲಿ ಪಾಲಿಕೆಯಿಂದ ನೀಡಲಾಗಿರುವ ಉದ್ದಿಮೆ ಪರವಾನಿಗೆಯನ್ನು ಯಾವುದೇ ಮುನ್ಸೂಚನೆ ನೀಡದೆ ರದ್ದುಗೊಳಿಸಲಾಗುವುದು ಎಂದು ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Join Whatsapp