ಭಾರತದಲ್ಲಿ ಅಲ್ಪಸಂಖ್ಯಾತ-ದಲಿತರ ಮೇಲಿನ ಮಾನವ ಹಕ್ಕುಗಳ ಉಲ್ಲಂಘನೆಯ ಕುರಿತು ಮೋದಿಯವರಲ್ಲಿ ನೇರವಾಗಿ ಚರ್ಚಿಸಿ : ಬ್ರಿಟನ್ ಪ್ರಧಾನಿಗೆ ಸಂಸತ್ ಸದಸ್ಯರ ಒತ್ತಾಯ

Prasthutha|

ಮುಂದಿನ ತಿಂಗಳು ಭಾರತಕ್ಕೆ ಭೇಟಿ ನೀಡುತ್ತಿರುವ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರಲ್ಲಿ “ಭಾರತದಲ್ಲಿರುವ ಶಿಕ್ಷಣ ಸಂಸ್ಥೆಗಳು ಮತ್ತು ಇತರ ಗುಂಪುಗಳ ಸ್ವಾತಂತ್ರ್ಯ” ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ನೇರವಾಗಿ ಮಾತುಕತೆ ನಡೆಸುವಂತೆ ಬ್ರಿಟನ್ ಸಂಸತ್ ಸದಸ್ಯರು ಒತ್ತಾಯಿಸಿದ್ದಾರೆ. ಎಂಟು ಪಕ್ಷಗಳ ಸದಸ್ಯರು ಭಾಗವಹಿಸಿದ ಚರ್ಚೆಯಲ್ಲಿ “ಕಾಶ್ಮೀರದ ಪರಿಸ್ಥಿತಿ, ಪತ್ರಕರ್ತರ ಬಂಧನ, ಹಿಂದೂಯೇತರ ಅಲ್ಪಸಂಖ್ಯಾತರು ಮತ್ತು ದಲಿತರ ಪರ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆಯ ವಿರುದ್ಧ ಹೋರಾಡುತ್ತಿರುವವರಿಗೆ ಕಿರುಕುಳ ನೀಡುತ್ತಿರುವ ವಿಷಯಗಳ ಕುರಿತೂ ಭಾರತದ ಪ್ರಧಾನಿಯೊಂದಿಗೆ ಬೋರಿಸ್ ಚರ್ಚಿಸಬೇಕೆಂದು ಒತ್ತಾಯಿಸಿದ್ದಾರೆ.

- Advertisement -

ಪ್ರಜಾಪ್ರಭುತ್ವ ನೆಲೆಯಲ್ಲಿ ಭಾರತ ಮತ್ತು ಬ್ರಿಟನಿನ ಸಂಬಂಧ ತುಂಬಾ ನಿಕಟವಾಗಿದ್ದು, ಪ್ರಜಾಪ್ರಭುತ್ವದಲ್ಲಿ ಸಮಾಜದ ಮುಕ್ತ ನಾಗರಿಕ ಹಕ್ಕಿನ ಮಹತ್ವವನ್ನು ಒತ್ತಿ ಹೇಳಬೇಕು ಎಂದು ಪ್ರತಿಪಕ್ಷದ ಸದಸ್ಯ ರಾಯ್ ಕಾಲಿನ್ಸ್ ಅಭಿಪ್ರಾಯಪಟ್ಟಿದ್ದಾರೆ. ಬ್ರಿಟನ್ ಪ್ರಧಾನಿ ಶೀಘ್ರದಲ್ಲೇ ಭಾರತಕ್ಕೆ ಭೇಟಿ ನೀಡಲಿದ್ದು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಈ ವಿಷಯಗಳ ಕುರಿತು ಚರ್ಚೆ ನಡೆಸುತ್ತಾರೆಯೇ ಎಂದು ಕಾದುನೋಡಬೇಕಿದೆ. ನೂತನ ಕೃಷಿಕಾಯ್ದೆಯನ್ನು ವಿರೋಧಿಸಿ ನಡೆಯುವ ಆಂದೋಲನದ ಕುರಿತು ವಾರದ ಹಿಂದೆಯಷ್ಟೇ ಹೌಸ್ ಆಫ್ ಕಾಮನ್ಸ್ ಸಮಿತಿಯು ಚರ್ಚೆ ನಡೆಸಿತ್ತು ಎನ್ನಲಾಗಿದೆ.



Join Whatsapp