ಕೋಲ್ಕತ್ತಾ : ಬಂಗಾಳದಲ್ಲಿ ಅಧಿಕಾರವನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಿರುವ ಬಿಜೆಪಿಯನ್ನು ಸೋಲಿಸಲು ‘ಬಿಜೆಪಿಗೆ ಮತ ಹಾಕಬೇಡಿ’ ಎಂಬ ಅಭಿಯಾನ ಬೃಹತ್ ಜನಾಂದೋಲನವಾಗಿ ಮಾರ್ಪಟ್ಟಿದೆ. ಅಭಿಯಾನದ ಅಂಗವಾಗಿ ನಡೆಯುತ್ತಿರುವ ರ್ಯಾಲಿಯಲ್ಲಿ ಸಾವಿರಾರು ಜನರು ಭಾಗವಹಿಸುತ್ತಿದ್ದಾರೆ.
ಮಾನವ ಹಕ್ಕುಗಳ ಹೋರಾಟಗಾರರು, ವಿದ್ಯಾರ್ಥಿಗಳು, ಯುವಕರು ಮತ್ತು ಸಾಂಸ್ಕೃತಿಕ ಕಾರ್ಯಕರ್ತರು ಸೇರಿದಂತೆ ರಾಜ್ಯದ ಹಲವಾರು ಸಾಮಾಜಿಕ ಹೋರಾಟಗಾರರು ‘ಬಿಜೆಪಿಗೆ ಮತ ಚಲಾಯಿಸಬೇಡಿ’ ಎಂಬ ಅಭಿಯಾನಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ರೈತರ ಹೋರಾಟವನ್ನು ಮುನ್ನಡೆಸುತ್ತಿರುವ ಸಮುಕ್ತ ಕಿಸಾನ್ ಮೋರ್ಚಾ ಕೂಡ ಈ ಅಭಿಯಾನಕ್ಕೆ ಕೈಜೋಡಿಸಿದೆ.