ವಿಜಯೇಂದ್ರ ಗ್ಯಾಂಗ್ ನಾಟಕವಾಡುತ್ತಿದೆ: ಎಂ ಬಿ ಪಾಟೀಲ್

Prasthutha|

ಬೆಂಗಳೂರು: ಮೋದಿ ಅಧಿಕಾರಕ್ಕೆ ಬಂದ ನಂತರ ಅಡುಗೆ ಅನಿಲ 400 ರೂ., ಪೆಟ್ರೋಲ್ 38 ರೂ. ಮತ್ತು ಡೀಸೆಲ್‌ 35 ರೂ. ಹೆಚ್ಚಿಸಿದಾಗ ತೆಪ್ಪಗಿದ್ದ ಬಿಜೆಪಿಯ ಅಶೋಕ್ ಮತ್ತು ವಿಜಯೇಂದ್ರ ಗ್ಯಾಂಗ್ ಈಗ ಪ್ರತಿಭಟಿಸುತ್ತಿರುವುದು ಬರೀ ನಾಟಕ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಬಿಜೆಪಿಗೆ ನೀಡಿದ್ದಾರೆ.

- Advertisement -

ಮಂಗಳವಾರ ಇಲ್ಲಿನ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಬಿಜೆಪಿ ಅಧಿಕಾರದಲ್ಲಿ ಇರುವ ಮಹಾರಾಷ್ಟ್ರ, ಮಧ್ಯಪ್ರದೇಶ ಮುಂತಾದ ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್‌ ಬೆಲೆಗಳು ನಮಗಿಂತ ಜಾಸ್ತಿ ಇದೆ. ಬಿಜೆಪಿ ಅಲ್ಲೇಕೆ ಪ್ರತಿಭಟಿಸುತ್ತಿಲ್ಲ ಎಂದು ಪ್ರಶ್ನಿಸಿದರು.

ಲೋಕಸಭಾ ಚುನಾವಣೆ ಫಲಿತಾಂಶಕ್ಕೂ ಈಗಿನ ಬೆಲೆ ಏರಿಕೆಗೂ ಸಂಬಂಧ ಇಲ್ಲ. ಜೊತೆಗೆ ನಾವು ಕೊಟ್ಟಿರುವ ಗ್ಯಾರಂಟಿ ಗಳು ಕೂಡ ನಿಲ್ಲುವುದಿಲ್ಲ. ಅವುಗಳ ಜತೆಯಲ್ಲೇ ನಾವು ಅಭಿವೃದ್ಧಿ ಕೂಡ ಸಾಧಿಸುತ್ತೇವೆ ಎಂದು ಅವರು ಪ್ರತಿಪಾದಿಸಿದರು.

- Advertisement -

ಕಳೆದ ಹತ್ತು ವರ್ಷಗಳಲ್ಲಿ ಕಚ್ಚಾ ತೈಲದ ‌ಬೆಲೆ ಸಾಕಷ್ಟು ಇಳಿದಿದೆ. ಆದರೆ ಮೋದಿ ಸರಕಾರ ಮಾತ್ರ ತೈಲೋತ್ಪನ್ನಗಳ ಬೆಲೆಯನ್ನು ಒಮ್ಮೆ ಕೂಡ ಇಳಿಸಿಲ್ಲ. ಆದರೆ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರದ ಅವಧಿಯಲ್ಲಿ ಪೆಟ್ರೋಲ್ , ಡೀಸೆಲ್‌ ಮತ್ತು ಎಲ್ ಪಿಜಿ‌ ಬೆಲೆ ಜನರ ಕೈಗೆ ಎಟುಕುವಂತಿತ್ತು ಎಂದು ಸಚಿವರು ಹೇಳಿದರು.

ನಾವೀಗ ಕೇವಲ ಮೂರು ರೂಪಾಯಿ ಮಾತ್ರ ಏರಿಸಿದ್ದೇವೆ. ಆದರೆ ಮೋದಿ ಮತ್ತು ಬಿಜೆಪಿ ನೀತಿಗಳಿಂದ ಜನರ ಜೀವನ ದುಬಾರಿಯಾಗಿದೆ. ಇದು ವಾಸ್ತವ ಸಂಗತಿ. ಬಿಜೆಪಿ ನಾಯಕರು ಮೊದಲು ಇದರ ವಿರುದ್ಧ ದನಿ ಎತ್ತುವ ಕರ್ತವ್ಯ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.



Join Whatsapp