ಮಹಾರಾಷ್ಟ್ರ, ಮಧ್ಯಪ್ರದೇಶಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ತೈಲ ಬೆಲೆ ಕಡಿಮೆಯಿದೆ: ಸಿದ್ದರಾಮಯ್ಯ

Prasthutha|

ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಿದ ನಿರ್ಧಾರವನ್ನು ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಜಿಎಸ್​ಟಿ ವ್ಯವಸ್ಥೆ ಜಾರಿಗೊಳಿಸಿದ ನಂತರ ರಾಜ್ಯ ಸರ್ಕಾರಗಳ ಸಂಪನ್ಮೂಲ ಕ್ರೋಢೀಕರಣಕ್ಕೆ ಇರುವ ಅವಕಾಶ ಸೀಮಿತಗೊಂಡಿದೆ. ರಾಜ್ಯ ಸರ್ಕಾರಕ್ಕೆ ಕೇವಲ ನೋಂದಣಿ ಮತ್ತು ಮುದ್ರಾಂಕ ಶುಲ್ಕ, ವಾಹನ ತೆರಿಗೆ, ಪೆಟ್ರೋಲ್‌, ಡೀಸೆಲ್‌ ಮೇಲಿನ ಮಾರಾಟ ತೆರಿಗೆ ಹಾಗೂ ಮದ್ಯದ ಮೇಲಿನ ಮಾರಾಟ ತೆರಿಗೆ ಹೊರತುಪಡಿಸಿ ಇತರ ಯಾವುದೇ ಆದಾಯ ಮೂಲಗಳು ಉಳಿದಿಲ್ಲ ಎಂದು ಹೇಳಿದ್ದಾರೆ.

- Advertisement -

ಈ ಹಿನ್ನೆಲೆಯಲ್ಲಿ ಜನರಿಗೆ ಹೊರೆಯಾಗದಂತೆ ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಿದ್ದು, ಈ ಬದಲಾವಣೆಯ ನಂತರವೂ ದಕ್ಷಿಣ ಭಾರತದ ಇತರ ರಾಜ್ಯಗಳು ಹಾಗೂ ಬಿಜೆಪಿ ಆಡಳಿತದಲ್ಲಿರುವ ಮಹಾರಾಷ್ಟ್ರ ಹಾಗೂ ಮಧ್ಯಪ್ರದೇಶಗಳಿಗೆ ಹೋಲಿಕೆ ಮಾಡಿದರೆ ರಾಜ್ಯದಲ್ಲಿ ತೈಲ ಬೆಲೆ ಕಡಿಮೆಯಿದೆ’ ಎಂದು ಹೇಳಿದ್ದಾರೆ.



Join Whatsapp