ಇವಿಎಂ ಕಾರಣಕ್ಕೆ ಜೆಡಿಎಸ್ ಮತ್ತು ಬಿಜೆಪಿಗೆ ನಿರೀಕ್ಷೆಗಿಂತ ಹೆಚ್ಚು ಸ್ಥಾನಗಳು ಬಂದಿವೆ: ಡಿಕೆಶಿ

Prasthutha|

ಬೆಂಗಳೂರು: ಇವಿಎಂ ಕಾರಣಕ್ಕೆ ಜೆಡಿಎಸ್ ಮತ್ತು ಬಿಜೆಪಿಗೆ ನಿರೀಕ್ಷೆಗಿಂತ ಹೆಚ್ಚು ಸ್ಥಾನಗಳು ಬಂದಿವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

- Advertisement -

ವಿಧಾನಸೌಧ ಹಾಗೂ ಬಿಬಿಎಂಪಿ ಮುಖ್ಯ ಕಚೇರಿ ಬಳಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಇವಿಎಂ ತೊಲಗಬೇಕು ಬ್ಯಾಲೆಟ್ ಮತದಾನ ಮತ್ತೆ ಬರಬೇಕು. ಫಲಿತಾಂಶದ ಬಗ್ಗೆ ಮತ್ತೊಮ್ಮೆ ಪರಿಶೀಲನೆ ನಡೆಸಬೇಕಾಗಿದೆ ಎಂದಿದ್ದಾರೆ.

ಮತ್ತೊಮ್ಮೆ ಫಲಿತಾಂಶವನ್ನು ಪರಿಶೀಲನೆ ನಡೆಸಬಹುದು. ಮಧ್ಯಪ್ರದೇಶದಲ್ಲಿ ಬ್ಯಾಲೆಟ್ ಮತದಾನ ಇದ್ದಾಗ ಮೂರರಲ್ಲಿ ಎರಡು ಭಾಗದಷ್ಟು ಮತಗಳು ಕಾಂಗ್ರೆಸ್ ಪರವಾಗಿ ಬೀಳುತ್ತಿದ್ದವು. ಇವಿಎಂ ಕಾರಣಕ್ಕೆ ಈಗ ಪರಿಸ್ಥಿತಿ ಬದಲಾಗಿದೆ. ಇದರ ಬಗ್ಗೆ ಮತ್ತಷ್ಟು ಆಳವಾಗಿ ಚಿಂತನೆ ನಡೆಸಬೇಕಿದೆ ಎಂದು ಹೇಳಿದರು.

- Advertisement -

ಬಿಬಿಎಂಪಿ ಆಸ್ತಿಗಳನ್ನು ಸರಕಾರ ಅಡವಿಡುತ್ತಿದೆ ಎನ್ನುವ ಪ್ರಶ್ನೆಗೆ, ಬಿಬಿಎಂಪಿಯ ಆಸ್ತಿಯಗಳ ರಕ್ಷಣೆ ಹಾಗೂ ಎಷ್ಟು ಆಸ್ತಿಗಳಿವೆ ಎನ್ನುವ ಮರು ಸಮೀಕ್ಷೆ ಅಗತ್ಯ. ಹೊರತು ಯಾವ ಆರೋಪವೂ ವಾಸ್ತವ ಅಲ್ಲ ಎಂದು ಡಿಸಿಎಂ ಹೇಳಿದ್ದಾರೆ.



Join Whatsapp