ಇಂದು ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ಸೈಕಲ್ ಜಾಥಾ

Prasthutha|

ಬೆಂಗಳೂರು: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ಇಂದು ಬಿಜೆಪಿ ಸೈಕಲ್ ಜಾಥಾ ನಡೆಸಲಿದೆ.

- Advertisement -

ಜಗನ್ನಾಥ ಭವನದಿಂದ ವಿಧಾನಸೌಧಕ್ಕೆ ಸೈಕಲ್ ಜಾಥಾ ನಡೆಸಲಾಗುವುದು ಎಂದು ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಹರೀಶ್ ತಿಳಿಸಿದ್ದಾರೆ.

ಬೆಳಿಗ್ಗೆ 9.00 ಗಂಟೆಗೆ ಜಗನ್ನಾಥ ಭವನದಿಂದ ಜಾಥಾ ಆರಂಭವಾಗಲಿದ್ದು, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಉಪ ಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ್, ವಿಧಾನಪರಿಷತ್ ನೂತನ ಸದಸ್ಯ ಸಿ.ಟಿ.ರವಿ ಅವರು ನೇತೃತ್ವ ವಹಿಸಲಿದ್ದಾರೆ. ಸುಮಾರು 250-300 ಸೈಕಲ್‍ಗಳ ಜಾಥಾ ನಡೆಯಲಿದೆ ಎಂದು ಮಾಹಿತಿ ನೀಡಿದರು.

- Advertisement -

ಬೆಂಗಳೂರಿನ ಮಾಜಿ ಸಚಿವರು, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಬಿಬಿಎಂಪಿ ಮಾಜಿ ಸದಸ್ಯರು, ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಸಿ.ಕೆ.ರಾಮಮೂರ್ತಿ ಮತ್ತು ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸುವರು ಎಂದು ವಿವರಿಸಿದ್ದಾರೆ.

Join Whatsapp