ಬಸ್ ಪ್ರಯಾಣ ದರ ಏರಿಸುವ ಸುಳಿವು ನೀಡಿದ ಸಚಿವ ರಾಮಲಿಂಗಾರೆಡ್ಡಿ

Prasthutha|

ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಬೆನ್ನಲ್ಲೇ ಶೀಘ್ರವೇ ಬಸ್ ಪ್ರಯಾಣ ದರ ಹೆಚ್ಚಿಸುವ ಸುಳಿವನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೀಡಿದ್ದಾರೆ.

- Advertisement -

ಈ ಬಗ್ಗೆ ಮಾತನಾಡಿದ ಅವರು, 2014ರಿಂದ ಬಿಎಂಟಿಸಿ 4 ವರ್ಷದಿಂದ ಕೆಎಸ್‌ ಆರ್‌ ಟಿಸಿ ಪ್ರಯಾಣ ದರ ಏರಿಕೆಯಾಗಿಲ್ಲ. ಡೀಸೆಲ್ ದರ ಹೆಚ್ಚಳದಿಂದ ಹೆಚ್ಚು ಹೊರೆ ಆಗುತ್ತಿದೆ. ನಿಗಮಗಳಿಂದ ಪ್ರಸ್ತಾವನೆ ಬಂದರೆ ಪರಿಶೀಲಿಸುತ್ತೇವೆ. ಶಕ್ತಿ ಗ್ಯಾರಂಟಿ ಯೋಜನೆಯ 1,100 ಕೋಟಿ ರೂ. ಹಣವನ್ನು ಸಾರಿಗೆ ನಿಗಮಗಳಿಗೆ ಸರ್ಕಾರ ಬಾಕಿ ಉಳಿಸಿಕೊಂಡಿದೆ ಎಂದು ಅವರು ತಿಳಿಸಿದ್ದಾರೆ.



Join Whatsapp