ತಮಿಳುನಾಡಿನಲ್ಲಿ ಕಳ್ಳಭಟ್ಟಿ ಕುಡಿದು 30 ಮಂದಿ ಮೃತ್ಯು: ಸಿಐಡಿ ತನಿಖೆಗೆ ಸ್ಟಾಲಿನ್ ಆದೇಶ

Prasthutha|

ಚೆನ್ನೈ: ಕಳ್ಳಭಟ್ಟಿ ಕುಡಿದ ಪರಿಣಾಮ 30 ಮಂದಿ ಮೃತಪಟ್ಟಿದ್ದು, 60ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದಾರೆ. ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.

- Advertisement -

ಕಲ್ಲಕುರಿಚಿ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಅಸ್ವಸ್ಥರ ಚಿಕಿತ್ಸೆ ನಡೆಯುತ್ತಿದೆ.ಅಕ್ರಮ ಮದ್ಯ ಪ್ಯಾಕೆಟ್ ‘ಅರಕ್’ ಸೇವಿಸಿ ಜನರು ಅಸ್ವಸ್ಥಗೊಂಡಿದ್ದರು ಎಂದು ಮೂಲಗಳು ತಿಳಿಸಿವೆ. ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಈ ಪ್ರಕರಣದಲ್ಲಿ ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.


ಕಲ್ಲಕುರಿಚಿಯಲ್ಲಿ ಕಲಬೆರಕೆ ಮದ್ಯ ಸೇವಿಸಿ ಸಾವನ್ನಪ್ಪಿರುವ ಸುದ್ದಿ ಕೇಳಿ ನನಗೆ ಆಘಾತವಾಗಿದೆ ಮತ್ತು ದುಃಖವಾಗಿದೆ. ಈ ಪ್ರಕರಣದಲ್ಲಿ ಅಪರಾಧದಲ್ಲಿ ಭಾಗಿಯಾದವರನ್ನು ಬಂಧಿಸಲಾಗಿದೆ. ಇದನ್ನು ತಡೆಯಲು ವಿಫಲರಾದ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ. ತಕ್ಷಣವೇ ಸಮಾಜವನ್ನು ಹಾಳುಗೆಡವುವ ಇಂತಹ ಕೃತ್ಯಗಳಲ್ಲಿ ಭಾಗಿಯಾದವರ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸ್ಟಾಲಿನ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

- Advertisement -


ಸಾವಿನ ವರದಿ ಹೊರಬಿದ್ದ ಕೂಡಲೇ ಡಿಎಂಕೆ ಸರ್ಕಾರ ಕ್ರಮ ಕೈಗೊಂಡು ಜಿಲ್ಲಾಧಿಕಾರಿ ಶ್ರವಣಕುಮಾರ್ ಜಾತಾವತ್ ಅವರನ್ನು ವರ್ಗಾವಣೆ ಮಾಡಿದೆ.



Join Whatsapp