ಟೀಂ ಇಂಡಿಯಾ ಮಾಜಿ ಆಟಗಾರ ಆತ್ಮಹತ್ಯೆ

Prasthutha|

ಬೆಂಗಳೂರು: ಟೀಂ ಇಂಡಿಯಾ ಮಾಜಿ ಆಟಗಾರ ಅಪಾರ್ಟ್ಮೆಂಟ್ ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕೊತ್ತನೂರು ಬಳಿ ಸಂಭವಿಸಿದೆ.

- Advertisement -

52 ವರ್ಷದ ಡೇವಿಡ್ ಜಾನ್ಸನ್ ಆತ್ಮಹತ್ಯೆಗೆ ಶರಣಾದ ಮಾಜಿ ಕ್ರಿಕೆಟರ್ ಆಗಿದ್ದು, ಕಟ್ಟಡದಿಂದ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಡೇವಿಡ್ ಜಾನ್ಸನ್ ಅವರು 1996ರಲ್ಲಿ ಭಾರತ ಪರವಾಗಿ ಟೆಸ್ಟ್ ಮ್ಯಾಚ್ ಆಡಿದ್ದರು. ಕೆಪಿಎಲ್ ನಲ್ಲಿ ಬೆಳಗಾವಿ ಪ್ಯಾಂಥರ್ಸ್ ಪರವಾಗಿ ಆಟವಾಡಿದ್ದರು. ಕಳೆದ ಕೆಲ ಸಮಯದಿಂದ ಅನಾರೋಗ್ಯದಿಂದ ಬಳುತ್ತಿದ್ದ ಡೇವಿಡ್ ಜಾನ್ಸನ್ ಅವರು ಖಿನ್ನತೆಗೊಳಗಾಗಿ ಆತ್ಮಹತ್ಯೆಗೆ ಶರಣಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಮೃತರು ಖಿನ್ನತೆಗೊಳಗಾಗಿ ವಿಪರೀತ ಕುಡಿತದ ಚಟಕ್ಕೆ ದಾಸರಾಗಿದ್ದರು ಎನ್ನಲಾಗಿದೆ. ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸ್ಥಳೀಯ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.



Join Whatsapp