ದ.ಕ. ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ: ನಾಳೆಯಿಂದ ರೆಡ್ ಅಲರ್ಟ್

Prasthutha|

ಮಂಗಳೂರು: ರಾಜ್ಯದ 10 ಜಿಲ್ಲೆಗಳಿಗೆ ಶನಿವಾರದಿಂದ ಭಾರಿ ಮಳೆಯ ಅಲರ್ಟ್ ಘೋಷಿಸಲಾಗಿದ್ದು, ಕರಾವಳಿಯ ಮೂರು ಜಿಲ್ಲೆಗಳಿಗೆ ‘ರೆಡ್‌ ಅಲರ್ಟ್’ ನೀಡಲಾಗಿದೆ.

- Advertisement -

ಭಾನುವಾರ 13 ಜಿಲ್ಲೆಗಳಿಗೆ ಭಾರಿ ಮಳೆಯ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಕೆಲವೊಮ್ಮೆ ಮೇ ಗಾಳಿಯು ಪ್ರಬಲವಾಗುವ ಸಂಭವವಿದೆ ಎಂದು ಇಲಾಖೆ ಹೇಳಿದೆ.

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ (ಜೂನ್ 21)ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಶುಕ್ರವಾರ ‘ಆರೆಂಜ್ ಅಲರ್ಟ್’ ನೀಡಲಾಗಿದೆ.

- Advertisement -

ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ 30ರಿಂದ 40 ಕಿ.ಮೀ. ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಇದೆಯೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಉದ್ದಕ್ಕೂ ಹಾಗೂ ಹೊರಗೆ ಚಂಡಮಾರುತ ರೀತಿಯ ವಾತಾವರಣ ಇರಲಿದೆ. ಗಾಳಿ ಗಂಟೆಗೆ 45ರಿಂದ 55 ಕಿ.ಮೀ. ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಆದ್ದರಿಂದ ಮೀನುಗಾರರು ಎಚ್ಚರಿಕೆ ವಹಿಸಬೇಕು ಎಂದು ಇಲಾಖೆ ತಿಳಿಸಿದೆ.



Join Whatsapp