ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಸ್ಲಿಮೇತರರ ಸಂಪತ್ತನ್ನು ಕಸಿದುಕೊಂಡು ತನ್ನ ಆಪ್ತವಾದ ಮುಸ್ಲಿಮ್ ಸಮುದಾಯಕ್ಕೆ ಹಂಚುತ್ತದೆ ಎಂಬ ಅನಿಮೇಟೆಡ್ ವಿಡಿಯೊವನ್ನು ಪಕ್ಷದ ಅಧಿಕೃತ ಸಾಮಾಜಿಕ ಜಾಲ ಖಾತೆಗಳಲ್ಲಿ ಪ್ರಚಾರ ಮಾಡಿದ ಕೇಂದ್ರ ಆರೋಗ್ಯ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಜೆ.ಪಿ.ನಡ್ಡಾ ಮತ್ತು ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ಧ ದಾಖಲಾಗಿರುವ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ಅನುಮತಿ ನೀಡಿದೆ.
ಆದರೆ ನಡ್ಡಾ ಮತ್ತು ಮಾಳವೀಯ ಅವರ ಖುದ್ದು ಹಾಜರಾತಿಗೆ ನ್ಯಾಯಾಲಯ ವಿನಾಯಿತಿ ನೀಡಿದೆ.
ರಾಜ್ಯ ಸರ್ಕಾರದ ಪರ ಹಾಜರಿದ್ದ ರಾಜ್ಯ ಪಬ್ಲಿಕ್ ಪ್ರಾಸಿಕ್ಯೂಟರ್ ಬಿ.ಎನ್.ಜಗದೀಶ್ ‘ನ್ಯಾಯಾಲಯ ತನಿಖೆ ನಡೆಸಲು ನಮಗೆ ಅನುಮತಿ ನೀಡಬೇಕು. ನಾವು ಅವರ ವಿರುದ್ಧ ದುರುದ್ದೇಶದ ಕ್ರಮ ಕೈಗೊಳ್ಳುವುದಿಲ್ಲ’ ಎಂದು ಭರವಸೆ ನೀಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಪ್ರಕರಣವನ್ನು ವಿಸ್ತೃತವಾಗಿ ಪರಿಗಣಿಸಬೇಕಿದೆ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿ ಪ್ರತಿವಾದಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಿದೆ.