ಖ್ಯಾತ ಸಾಹಿತಿ ಕಮಲಾ ಹಂಪನಾ ಇನ್ನಿಲ್ಲ

Prasthutha|

- Advertisement -

ಬೆಂಗಳೂರು: ಖ್ಯಾತ ಸಾಹಿತಿ ಕಮಲಾ ಹಂಪನಾ ನಿಧನರಾಗಿದ್ದಾರೆ.

ಇಂದು ಬೆಳಗಿನಜಾವ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಕಮಲಾ ಹಂಪನಾ ಅವರು ರಾಜರಾಜೇಶ್ವರಿ ನಗರದಲ್ಲಿರುವ ಅವರ ಹಿರಿಯ ಪುತ್ರಿ ರಾಜಶ್ರೀ ಅವರ ನಿವಾಸದಲ್ಲಿ ನೆಲೆಸಿದ್ದರು. ಕಮಲಾ ಹಂಪನಾ ಅವರ ಪಾರ್ಥಿವ ಶರೀರವನ್ನು ರಾಜಾಜಿನಗರದ 18 ನೇ ಕ್ರಾಸ್ ನಲ್ಲಿರುವ ಅವರ ಸ್ವಂತ ನಿವಾಸ ಸನಿಮಗೆ ಕರೆತರಲಾಗುವುದು. ಅಲ್ಲಿ ಸಾರ್ವಜನಿಕರಿಗಾಗಿ ಅಂತಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಕುಟುಂಬದ ಸದಸ್ಯರು ಮಾಹಿತಿ ನೀಡಿದ್ದಾರೆ.

- Advertisement -

ಕಮಲಾ ಹಂಪನಾ ಅವರು ಖ್ಯಾತ ವಾಗ್ಮಿಯಾಗಿದ್ದು, ಅವರು ಹಾಗೂ ಅವರ ಪತಿ ಹಿರಿಯ ಸಾಹಿತಿ ಹಂಪ ನಾಗರಾಜಯ್ಯ ಅವರಿಗೂ ಹಂಪಿ ವಿಶ್ವವಿದ್ಯಾಲಯ ನಾಡೋಜ ಪ್ರಶಸ್ತಿ ನೀಡಿ ಗೌರವಿಸಿದೆ.

ಕಮಲಾ ಹಂಪನಾ ಅವರು ಬೆಂಗಳೂರಿನ ಮಹಾರಾಣಿ ಕಾಲೇಜಿನಲ್ಲಿ ಪ್ರಿನ್ಸಿಪಾಲ್ ಆಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದರು.



Join Whatsapp