ಬೆಂಗಳೂರು: ಸೂರಜ್ ರೇವಣ್ಣ ವಿರುದ್ಧ ಆರೋಪ ಸಂಬಂಧ ಇನ್ನೂ ಯಾವುದೇ ದೂರು ಬಂದಿಲ್ಲ. ದೂರು ಬಂದ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಪ್ರಕರಣದ ಬೆಳವಣಿಗೆ ನೋಡಿ ಸಿಐಡಿಗೆ ವಹಿಸುವ ಕೆಲಸ ಮಾಡ್ತೇವೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.
ಸದಾಶಿವನಗರದ ತಮ್ಮ ನಿವಾಸದಲ್ಲಿಂದು ಗೃಹ ಸಚಿವ ಪರಮೇಶ್ವರ್ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷ ತನ್ವೀರ್ ಸೇಠ್ ಅವರನ್ನ ಭೇಟಿಯಾದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೂರಜ್ ರೇವಣ್ಣ ವಿರುದ್ಧ ಆರೋಪ ಇನ್ನೂ ಯಾವುದೇ ದೂರು ಬಂದಿಲ್ಲ. ದೂರು ಬಂದ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.