ವಿಲ್ಲುಪುರಂ: ತಮಿಳುನಾಡಿನ ಕಲ್ಲಕುರಿಚಿಯಲ್ಲಿ ಸಂಭವಿಸಿದ ಕಳ್ಳಭಟ್ಟಿ ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ 55 ಕ್ಕೆ ಏರಿದೆ, ಆದರೆ ಅಕ್ರಮ ಮದ್ಯ ಸೇವಿಸಿದ 100 ಕ್ಕೂ ಹೆಚ್ಚು ಜನರು ಇನ್ನೂ ಆಸ್ಪತ್ರೆಗೆ ದಾಖಲಾಗಿದ್ದಾರೆ.
ವಶಪಡಿಸಿಕೊಂಡ 200 ಲೀಟರ್ ಕಳ್ಳಭಟ್ಟಿಯಲ್ಲಿ ಮಾರಣಾಂತಿಕ ಮೆಥನಾಲ್ ಇದೆ ಎಂದು ಪರೀಕ್ಷೆಗಳಿಂದ ಬಹಿರಂಗವಾಗಿದೆ.
ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಈ ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿದ್ದು,ಪ್ರಕರಣವನ್ನು ಸಿಬಿ-ಸಿಐಡಿಗೆ ವರ್ಗಾಯಿಸಲು ಆದೇಶಿಸಿದ್ದಾರೆ. ಕಲ್ಲಕುರಿಚಿ ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡಲು ಆದೇಶಿಸಿದ ಸಿಎಂ, ಜಿಲ್ಲೆಯ ಮದ್ಯಪಾನ ಮತ್ತು ನಿಷೇಧಿತ ವಿಭಾಗದ ಅಧಿಕಾರಿಗಳ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಇತರ ಒಂಬತ್ತು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿದ್ದಾರೆ. ಮೃತರ ಕುಟುಂಬಗಳಿಗೆ 10 ಲಕ್ಷ ರೂಪಾಯಿ ಹಾಗೂ ಚಿಕಿತ್ಸೆ ಪಡೆಯುತ್ತಿರುವವರಿಗೆ 50 ಸಾವಿರ ರೂಪಾಯಿ ಪರಿಹಾರವನ್ನು ಸಿಎಂ ಘೋಷಿಸಿದ್ದಾರೆ.