ತೈಲ ಬೆಲೆ ಏರಿಕೆಗೂ ಗ್ಯಾರಂಟಿ ಯೋಜನೆಗೂ ಸಂಬಂಧವಿಲ್ಲ: ಡಿಕೆ ಶಿವಕುಮಾರ್

Prasthutha|

ಬೆಂಗಳೂರು: ತೈಲ ಬೆಲೆ ಏರಿಕೆಗೂ ಗ್ಯಾರಂಟಿಗೂ ಸಂಬಂಧವಿಲ್ಲ. ಎಲ್ಲಾ ಗ್ಯಾರಂಟಿಗಳು ಮುಂದುವರಿಯುತ್ತವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

- Advertisement -

ಪರಿಶ್ರಮ ನೀಟ್ ಅಕಾಡೆಮಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬೆಲೆ ಏರಿಕೆಗೆ ಗ್ಯಾರಂಟಿ ಕಾರಣ ಎಂದು ವಿಪಕ್ಷಗಳ ಹೇಳಿಕೆಗೆ ಯಾರು ಏನೇ ಹೇಳಿದರೂ ಬೆಲೆ ಏರಿಕೆಗೆ ಗ್ಯಾರಂಟಿ ಕಾರಣವಲ್ಲ. ಬೆಲೆ ಏರಿಕೆಯನ್ನು ಎಲ್ಲಾ ಸಂದರ್ಭದಲ್ಲಿ ಯಾವ ರೀತಿ ಮಾಡಬೇಕೋ ಆ ರೀತಿ ಮಾಡಿದ್ದೇವೆ. ಬಿಜೆಪಿ ಸರ್ಕಾರದಲ್ಲೂ ಬೆಲೆ ಏರಿಕೆ ಮಾಡಿದ್ದಾರೆ. ಆದರೆ ಅವರಂತೆ ನಾವು ಏರಿಸಿಲ್ಲ ಎಂದು ಹೇಳಿದ್ದಾರೆ.

ಒಂದು ರಾಜ್ಯ ಬಿಟ್ಟು ಎಲ್ಲಾ ರಾಜ್ಯದಲ್ಲೂ ಜಾಸ್ತಿ ಇದೆ. ಗ್ಯಾರಂಟಿಗಳಿಗೂ ಬೆಲೆ ಏರಿಕೆಗೂ ಸಂಬಂಧವಿಲ್ಲ. ಎಲ್ಲಾ ಗ್ಯಾರಂಟಿಗಳು ಮುಂದುವರಿಯುತ್ತವೆ. ಅಭಿವೃದ್ಧಿ ಕೆಲಸಕ್ಕೆ ಏನು ಬೇಕೋ ಅದನ್ನು ಮಾಡುತ್ತೇವೆ ಎಂದರು.

Join Whatsapp