ಲೈಂಗಿಕ ದೌರ್ಜನ್ಯ: ಪ್ರಜ್ವಲ್ ಸಹೋದರ ಸೂರಜ್ ರೇವಣ್ಣ ವಿರುದ್ಧ ಎಫ್‌ಐಆರ್

Prasthutha|

ಹಾಸನ: ಪ್ರಜ್ವಲ್ ರೇವಣ್ಣ ಸಹೋದರ, ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿರುದ್ಧ ಯುವಕನೋರ್ವನಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದ ಮೇಲೆ ಎಫ್‌ಐಆರ್ ದಾಖಲಾಗಿದೆ.

- Advertisement -

ಯುವಕ ನೀಡಿದ ದೂರನ್ನು ಆಧಾರದಲ್ಲಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಾಯ್ದೆ ಸಂಖ್ಯೆ 1860ರ ಅಡಿಯಲ್ಲಿರುವ ಸೆಕ್ಷನ್ 377 (ಅಸ್ವಾಭಾವಿಕ ಅಪರಾಧ), 342 (ತಪ್ಪಾದ ಬಂಧನಕ್ಕೆ ಶಿಕ್ಷೆ ) ಹಾಗೂ 506 (ಬೆದರಿಕೆ)ಯಡಿ ಪ್ರಕರಣ ದಾಖಲು ಮಾಡಲಾಗಿದೆ.

ಜೆಡಿಎಸ್ ಕಾರ್ಯಕರ್ತನೇ ಆದ ಯುವಕ, ಸೂರಜ್ ರೇವಣ್ಣ ತನ್ನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸುದೀರ್ಘವಾಗಿ ಬರೆದು ಶುಕ್ರವಾರ ಡಿಜಿ ಕಛೇರಿಯಲ್ಲಿ ದೂರು ನೀಡಿದ್ದರು. ಹಾಸನ ಎಸ್‌ಪಿಗೂ ದೂರಿನ ಪ್ರತಿ ಇ-ಮೇಲ್ ಮೂಲಕ ಕಳಿಸಿದ್ದರು.



Join Whatsapp