ಲೈಂಗಿಕ ದೌರ್ಜನ್ಯ: ಸೂರಜ್ ರೇವಣ್ಣ ಬಂಧನ

Prasthutha|

ಹಾಸನ: ಯುವಕನಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದ ಮೇಲೆ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣರನ್ನು ಬಂಧನ ಮಾಡಲಾಗಿದೆ.

- Advertisement -

ಸಂತ್ರಸ್ತ ಯುವಕ ನೀಡಿದ ದೂರನ್ನು ಆಧರಿಸಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಾಯ್ದೆ ಸಂಖ್ಯೆ 1860ರ ಅಡಿಯಲ್ಲಿರುವ ಸೆಕ್ಷನ್ 377 (ಅಸ್ವಾಭಾವಿಕ ಅಪರಾಧ), 342 (ತಪ್ಪಾದ ಬಂಧನಕ್ಕೆ ಶಿಕ್ಷೆ ) ಹಾಗೂ 506 (ಬೆದರಿಕೆ) ಅಡಿ ಪ್ರಕರಣ ದಾಖಲು ಮಾಡಲಾಗಿತ್ತು.

ಜು.16ರಂದು ಸಂಜೆ ಹೊಳೆನರಸೀಪುರ ತಾಲೂಕಿನ ಘನ್ನಿಕಡದಲ್ಲಿರುವ ಅವರ ತೋಟದ ಮನೆಯಲ್ಲಿ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಜೆಡಿಎಸ್ ಕಾರ್ಯಕರ್ತ ಸೂರಜ್ ರೇವಣ್ಣ ವಿರುದ್ಧ ಶನಿವಾರ ಹಾಸನ ಜಿಲ್ಲೆಯ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಹೇಳಿಕೆ ನೀಡಿದ್ದಾರೆ. ಅದರ ಆಧಾರದ ಮೇಲೆ ಹೊಳೆನರಸೀಪುರ ಗ್ರಾಮಾಂತರ ಪೊಲೀಸರು ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್ 377 (ವಯಸ್ಕರ ವಿರುದ್ಧ ಒಪ್ಪಿಗೆಯಿಲ್ಲದೆ ಲೈಂಗಿಕ ಸಂಪರ್ಕ/ಅಪ್ರಾಪ್ತರ ಜತೆಗೆ ಅಥವಾ ಪ್ರಾಣಿಗಳ ಜತೆಗೆ ಲೈಂಗಿಕ ಸಂಪರ್ಕ..), 342 (ತಪ್ಪು ಬಂಧನ), 506 (ಶಾಂತಿ ಕದಡುವ ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ಮತ್ತು  34 (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.



Join Whatsapp