ಇಡೀ ಶಿಕ್ಷಣ ವ್ಯವಸ್ಥೆಯನ್ನು ಮೋದಿ ಮಾಫಿಯಾಗೆ ಒಪ್ಪಿಸಿದ್ದಾರೆ: ಪ್ರಿಯಾಂಕ ಗಾಂಧಿ

Prasthutha|

ನವದೆಹಲಿ: ನೀಟ್-ಯುಜಿ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮಗಳ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಇಡೀ ಶಿಕ್ಷಣ ವ್ಯವಸ್ಥೆಯನ್ನು ಮೋದಿ ಮಾಫಿಯಾಗೆ ಒಪ್ಪಿಸಿದ್ದಾರೆ ಎಂದು ಹೇಳಿದ್ದಾರೆ.

- Advertisement -

ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಆದರೆ ನೀಟ್‌-ಪಿಜಿ, ಯುಜಿಸಿ-ನೆಟ್‌ ಮತ್ತು ಸಿಎಸ್‌ಐಆರ್‌-ನೆಟ್‌ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ. ದೇಶದ ಕೆಲವು ಮುಖ್ಯ ಪರೀಕ್ಷೆಗಳ ಸ್ಥಿತಿ ಇದು. ಬಿಜೆಪಿಯ ಆಡಳಿತದಲ್ಲಿ, ಶಿಕ್ಷಣ ವ್ಯವಸ್ಥೆಯನ್ನು ಮಾಫಿಯಾ ಮತ್ತು ಭ್ರಷ್ಟರಿಗೆ ವಹಿಸಲಾಗಿದೆ ಎಂದಿದ್ದಾರೆ.

ಮುಂದುವರೆದು ಅವರು, ದೇಶದ ಶಿಕ್ಷಣ ಮತ್ತು ಮಕ್ಕಳ ಭವಿಷ್ಯವನ್ನು ದುರಂಹಕಾರಿ ಮತ್ತು ಅಸಮರ್ಥ ರಾಜಕಾರಣಿಗಳ ಕೈಗೆ ನೀಡಿರುವುದರಿಂದ ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷೆ ರದ್ದು, ಕ್ಯಾಂಪಸ್‌ಗಳಿಂದ ಶಿಕ್ಷಣ ಕಣ್ಮರೆ ಆಗುತ್ತಿದೆ. ಇವು ಇಂದಿನ ನಮ್ಮ ಶಿಕ್ಷಣ ವ್ಯವಸ್ಥೆಯ ಗುರುತಾಗಿದೆ ಎಂದು ಹೇಳಿದ್ದಾರೆ.

- Advertisement -

ಇಂದು ಬಿಜೆಪಿ ಸರ್ಕಾರ ಯುವಜನರ ಭವಿಷ್ಯಕ್ಕೆ ದೊಡ್ಡ ತೊಡಕಾಗಿದೆ. ದೇಶದ ಸಮರ್ಥ ಯುವಕರು ಬಿಜೆಪಿಯ ಭ್ರಷ್ಟಾಚಾರದ ವಿರುದ್ಧ ಹೋರಾಡಲು ತಮ್ಮ ಅಮೂಲ್ಯ ಸಮಯ ಮತ್ತು ಶಕ್ತಿಯನ್ನು ವ್ಯರ್ಥ ಮಾಡುತ್ತಿದ್ದಾರೆ. ಅಸಹಾಯಕ ಮೋದಿ ಕೇವಲ ಪ್ರೇಕ್ಷಕರಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ಕಿಡಿಗಾರಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ

ವೈದ್ಯಕೀಯ ಶಿಕ್ಷಣ ಪ್ರವೇಶಕ್ಕೆ ನಡೆದ ನೀಟ್‌ ಪರೀಕ್ಷೆಯಲ್ಲಿನ ಹಗರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಉತ್ತರದಾಯಿಯಾಗಬೇಕಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ನೀಟ್‌ ಹಗರಣದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಅವರು, ಕಳೆದ ಹತ್ತು ದಿನಗಳಲ್ಲಿ ನಾಲ್ಕು ಪರೀಕ್ಷೆಗಳು ಮುಂದೂಡಲ್ಪಟ್ಟಿವೆ ಅಥವಾ ರದ್ದುಗೊಂಡಿವೆ ಎಂದು ತಿಳಿಸಿದ್ದಾರೆ.



Join Whatsapp