ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ನಿಂದ ಯಾರೇ ನಿಂತರೂ ನಾನೇ ಅಭ್ಯರ್ಥಿ: ಡಿಸಿಎಂ

Prasthutha|

ಬೆಂಗಳೂರು: ಚನ್ನಪಟ್ಟಣ ನನ್ನ ಊರು. ಅಲ್ಲಿ ಯಾರೇ ನಿಂತರೂ ನಾನೇ ಅಭ್ಯರ್ಥಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧೆ ಬಗ್ಗೆ ಕೇಳಿದ್ದಕ್ಕೆ ಹೀಗೆ ಪ್ರತಿಕ್ರಿಯಿಸಿದರು.

- Advertisement -

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಯಾರು ಏನೇ ಅಭಿಪ್ರಾಯ ಹೇಳಲಿ.ಜನರ ಜತೆ ಚರ್ಚೆ ಮಾಡಿದ ಬಳಿಕ ನನ್ನ ಅಭಿಪ್ರಾಯ ತೀರ್ಮಾನಿಸುತ್ತೇನೆ. ಚನ್ನಪಟ್ಟಣ ನನ್ನ ಊರು. ಅಲ್ಲಿ ಯಾರೇ ನಿಂತರೂ ನಾನೇ ಅಭ್ಯರ್ಥಿ ಎಂದು ಹೇಳಿದರು.

ರಾಜಕಾರಣಿಗಳ ಅಂತ್ಯವನ್ನು ಜನ ತೀರ್ಮಾನಿಸುತ್ತಾರೆ. ನನ್ನ ರಾಜಕೀಯ ಅಂತ್ಯ ತೀರ್ಮಾನ ಮಾಡುವವರು ಜನರು ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಅವರಿಗೆ ತಿರುಗೇಟು ನೀಡಿದರು.

- Advertisement -

ಉಪ ಚುನಾವಣೆಯನ್ನು ಕಾಂಗ್ರೆಸ್ ಪಕ್ಷ ನನ್ನ ನಾಯಕತ್ವದಲ್ಲಿ ಎದುರಿಸಲಿದೆ. ನಾನು ಹಾಗೂ ಸಿದ್ದರಾಮಯ್ಯ ಸೇರಿ ಚುನಾವಣೆ ನಡೆಸುತ್ತೇವೆ ಎಂದೂ ಹೇಳಿದರು.



Join Whatsapp