ತುರ್ತು ಪರಿಸ್ಥಿತಿಗೆ 50 ವರ್ಷ: ರಾಜ್ಯ ಬಿಜೆಪಿ ಪ್ರತಿಭಟನೆ

Prasthutha|

ಬೆಂಗಳೂರು: ತುರ್ತು ಪರಿಸ್ಥಿತಿಗೆ 50 ವರ್ಷವಾದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯಿಂದ ನಗರದಲ್ಲಿಂದು ಪ್ರತಿಭಟನೆ ನಡೆಸಲಾಯಿತು.

- Advertisement -


ಇಂದಿರಾಗಾಂಧಿ ಹೇರಿದ್ದ ತುರ್ತು ಪರಿಸ್ಥಿತಿ ಖಂಡಿಸಿದ್ದಲ್ಲದೇ, ಈ ಸಂಬಂಧ ರಾಹುಲ್ ಹಾಗೂ ಸೋನಿಯಾ ಗಾಂಧಿ ದೇಶದ ಜನರ ಕ್ಷಮೆ ಕೇಳಬೇಕೆಂದು ಆಗ್ರಹಿಸಿ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪೋಸ್ಟರ್ ಅಭಿಯಾನ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಕಾಂಗ್ರೆಸ್ ಪಕ್ಷ ದೇಶವಿರೋಧಿ ಮತ್ತು ಸಂವಿಧಾನದ ವಿರೋಧಿ. ಇಂಥ ಪಕ್ಷ ಇವತ್ತು ದೇಶದ ಮುಂದೆ ತಲೆಬಾಗಿ ಕೈಕಟ್ಟಿಕೊಂಡು ‘ತುರ್ತು ಪರಿಸ್ಥಿತಿ ಸಂಬಂಧ ದೇಶಕ್ಕೆ ದ್ರೋಹ ಬಗೆದಿದ್ದೇವೆ; ಸಂವಿಧಾನಕ್ಕೆ ಅಪಚಾರ ಮಾಡಿದ್ದೇವೆ’ ಎಂಬುದಾಗಿ ಒಪ್ಪಿಕೊಳ್ಳಬೇಕು ಎಂದು ಆಗ್ರಹಿಸಿದರು.



Join Whatsapp