UP: ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮ ಎಸಗುವವರಿಗೆ ಜೀವಾವಧಿ ಶಿಕ್ಷೆ ಮತ್ತು 1 ಕೋಟಿ ರೂ. ದಂಡ

Prasthutha|

ಲಖನೌ: ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷೆಗಳ ಅಕ್ರಮಗಳನ್ನು ತಡೆಯುವ ಸುಗ್ರೀವಾಜ್ಞೆಗೆ ಉತ್ತರ ಪ್ರದೇಶ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ.

- Advertisement -

ಪ್ರಶ್ನಿ ಪತ್ರಿಕೆ ಸೋರಿಕೆ ಮಾಡುವವರಿಗೆ ಮತ್ತು ಅಕ್ರಮ ಎಸಗುವವರಿಗೆ ಎರಡು ವರ್ಷಗಳ ಜೈಲು ಶಿಕ್ಷೆಯಿಂದ ಜೀವಾವಧಿ ಶಿಕ್ಷೆ ಮತ್ತು 1 ಕೋಟಿ ರೂ.ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶ ನೀಡಲಾಗಿದೆ.

ಸುಗ್ರೀವಾಜ್ಞೆಯು ರಾಜ್ಯ ಸಾರ್ವಜನಿಕ ಸೇವಾ ಆಯೋಗ, ಅಧೀನ ಸೇವಾ ಆಯ್ಕೆ ಮಂಡಳಿ, ಉತ್ತರ ಪ್ರದೇಶ ಮಂಡಳಿ, ವಿಶ್ವವಿದ್ಯಾಲಯಗಳು ಮತ್ತು ಅವುಗಳಿಂದ ನಾಮನಿರ್ದೇಶನಗೊಂಡ ಸಂಸ್ಥೆಗಳ ಪರೀಕ್ಷೆಗಳನ್ನು ಒಳಗೊಂಡಿದೆ.

- Advertisement -

ಈ ಸುಗ್ರೀವಾಜ್ಞೆಯ ಅಡಿಯಲ್ಲಿ, ನಕಲಿ ಪ್ರಶ್ನೆ ಪತ್ರಿಕೆಗಳನ್ನು ವಿತರಿಸುವುದು ಮತ್ತು ನಕಲಿ ಉದ್ಯೋಗ ವೆಬ್‌ಸೈಟ್‌ಗಳನ್ನು ಮಾಡುವುದು ಶಿಕ್ಷಾರ್ಹ ಅಪರಾಧಗಳೆಂದು ಪರಿಗಣಿಸಲಾಗಿದೆ.



Join Whatsapp