ನವದೆಹಲಿ: ರಾಹುಲ್ ಗಾಂಧಿ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ..
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮನೆಯಲ್ಲಿ ನಡೆದ ಸಭೆಯಲ್ಲಿ ರಾಹುಲ್ ಗಾಂಧಿ ಅವರನ್ನು ವಿರೋಧ ಪಕ್ಷದ ನಾಯಕ ಎಂದು ತೀರ್ಮಾನಿಸಲಾಗಿದೆ. ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಮಾಡುವಂತೆ ಹಂಗಾಮಿ ಸ್ಪೀಕರ್‌ಗೆ ಪತ್ರ ಬರೆಯಲಾಗಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಸಂಸದ ಕೆ. ಸಿ. ವೇಣುಗೋಪಾಲ್ ತಿಳಿಸಿದ್ದಾರೆ.