ಸ್ಪೀಕರ್ ಹುದ್ದೆಗೆ ‘ಇಂಡಿಯಾ’ ಅಭ್ಯರ್ಥಿ ನಾಮನಿರ್ದೇಶನ: ನಮ್ಮೊಂದಿಗೆ ಚರ್ಚಿಸಿಲ್ಲ ಎಂದ ಟಿಎಂಸಿ

Prasthutha|

ನವದೆಹಲಿ: ಲೋಕಸಭೆಯ ಸ್ಪೀಕರ್ ಹುದ್ದೆಗೆ ಕಾಂಗ್ರೆಸ್ ಸಂಸದ ಕೆ. ಸುರೇಶ್ ಅವರನ್ನು ಇಂಡಿಯಾ ಬ್ಲಾಕ್‌ ನ ಜಂಟಿ ನಾಮನಿರ್ದೇಶಿತ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಪ್ರತಿಪಕ್ಷಗಳ ನಿರ್ಧಾರದ ಬಗ್ಗೆ ನಮ್ಮ ಪಕ್ಷದ ನಾಯಕರ ಬಳಿ ಸಮಾಲೋಚನೆ ನಡೆಸಿಲ್ಲ ಎಂದು ಟಿಎಂಸಿ ಆರೋಪಿಸಿದೆ.

- Advertisement -

ಕಾಂಗ್ರೆಸ್ ಸಂಸದ ಕೆ. ಸುರೇಶ್ ಸ್ಪೀಕರ್ ಚುನಾವಣೆಗೆ ನಾಮಪತ್ರ ಸಲ್ಲಿಸುತ್ತಿದ್ದಂತೆ, ಅವರ ಪತ್ರಕ್ಕೆ ಸಹಿ ಮಾಡಿದ ಇಂಡಿಯಾ ಬ್ಲಾಕ್ ಪಕ್ಷಗಳಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಇರಲಿಲ್ಲ. ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಅವರನ್ನು ಈ ವಿಷಯದ ಬಗ್ಗೆ ತಮ್ಮ ಪಕ್ಷದ ನಿಲುವಿನ ಬಗ್ಗೆ ಕೇಳಿದಾಗ ಅವರು ಈ ಬಗ್ಗೆ ಯಾರೂ ಇನ್ನೂ ತಮ್ಮನ್ನು ಸಂಪರ್ಕಿಸಿಲ್ಲ ಎಂದು ಹೇಳಿದ್ದಾರೆ.

ಇದುವರೆಗೂ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ, ಯಾವುದೇ ಮಾತುಕತೆ ನಡೆದಿಲ್ಲ. ದುರದೃಷ್ಟವಶಾತ್ ಇದು ಏಕಪಕ್ಷೀಯ ನಿರ್ಧಾರವಾಗಿದೆ” ಎಂದು ಅವರು ಹೇಳಿದ್ದಾರೆ. ಈ ಬಗ್ಗೆ ನಾವು ಯಾವ ನಿಲುವು ತಳೆಯಬೇಕೆಂಬುದರ ಕುರಿತು ನಮ್ಮ ಪಕ್ಷದ ನಾಯಕಿ ಮಮತಾ ಬ್ಯಾನರ್ಜಿ ನಿರ್ಧರಿಸುತ್ತಾರೆ ಎಂದು ಅವರು ಹೇಳಿದ್ದಾರೆ.

- Advertisement -



Join Whatsapp