ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಕ್ಟೋಬರ್‌ ನಿಂದ 4 ತಿಂಗಳು ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

Prasthutha|

ಕಾರವಾರ: ಸಾಗರಮಾಲಾ ಯೋಜನೆಯಡಿ ಉತ್ತರ ಕನ್ನಡ  ಜಿಲ್ಲೆಯ ಶಿರಸಿ- ಕುಮಟಾ ಭಾಗದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಶೀಘ್ರ ಮುಗಿಸುವ ಹಿನ್ನೆಲೆಯಲ್ಲಿ ಅಕ್ಟೋಬರ್ 15ರಿಂದ 2025ರ ಫೆಬ್ರವರಿ 25ರವರೆಗೆ ಭಾರಿ ವಾಹನ ಸಂಚಾರವನ್ನು ನಿರ್ಬಂಧಿಸಲು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಆದೇಶಿಸಿದ್ದಾರೆ.

- Advertisement -

ಕುಮಟಾ-ಶಿರಸಿ ಮೂಲಕ ಸಿದ್ದಾಪುರಕ್ಕೆ ತೆರಳುವ ರಾಷ್ಟ್ರೀಯ ಹೆದ್ದಾರಿ-766ಇ ಮಾರ್ಗವಾಗಿ ಲಘು ವಾಹನಗಳು ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ.

ಅಂಕೋಲಾ-ಶಿರಸಿ ಮೂಲಕ ಯಲ್ಲಾಪುರ ರಾಷ್ಟ್ರೀಯ ಹೆದ್ದಾರಿ-63 ಮತ್ತು ಎಸ್.ಹೆಚ್-93 ಮಾರ್ಗವಾಗಿ ಎಲ್ಲಾ ವಿಧದ ವಾಹನಗಳು ಸಂಚರಿಸಲು ಅವಕಾಶ ನೀಡಿದೆ.

- Advertisement -

ಮಂಗಳೂರು-ಹೊನ್ನಾವರ ಶಿರಸಿ ಮೂಲಕ ಸಿದ್ದಾಪುರ ಮಾವಿನಗುಂಡಿ ಮಾರ್ಗವಾಗಿ ಎಲ್ಲಾ ವಿಧದ ವಾಹನಗಳಿಗೆ ಅವಕಾಶ ಮಾಡಿಕೊಡಲಾಗಿದೆ.



Join Whatsapp