ಅಯೋಧ್ಯೆ | ಮಳೆಗೆ ಗುಂಡಿ ಬಿದ್ದ ರಾಮಪಥ: 6 ಅಧಿಕಾರಿಗಳು ಅಮಾನತು

Prasthutha|

ಅಯೋಧ್ಯೆ: ಇಲ್ಲಿ ಹೊಸದಾಗಿ ನಿರ್ಮಿಸಲಾದ ರಾಮಪಥದಲ್ಲಿ ಗುಂಡಿ ಬಿದ್ದ ಹಾಗೂ ಜಲಾವೃತಗೊಂಡ ಪ್ರಕರಣ ಸಂಬಂಧ ಪಾಲಿಕೆಯ ಆರು ಅಧಿಕಾರಿಗಳನ್ನು ಉತ್ತರ ಪ್ರದೇಶ ಸರ್ಕಾರ ಅಮಾನತುಗೊಳಿಸಿದೆ. ನಿರ್ಲಕ್ಷ್ಯದ ಕಾರಣ ನೀಡಿ ಅಮಾನತು ಮಾಡಲಾಗಿದೆ.

- Advertisement -


ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಧ್ರುವ್ ಅಗರ್ವಾಲ್, ಸಹಾಯಕ ಎಂಜಿನಿಯರ್ ಅನುಜ್ ದೇಶ್ವಾಲ್, ಕಿರಿಯ ಎಂಜಿನಿಯರ್ ಪ್ರಭಾತ್ ಪಾಂಡೆ ಮತ್ತು ಉತ್ತರ ಪ್ರದೇಶ ಜಲ ನಿಗಮದ ಕಾರ್ಯನಿರ್ವಾಹಕ ಎಂಜಿನಿಯರ್ ಆನಂದ್ ಕುಮಾರ್ ದುಬೆ, ಸಹಾಯಕ ಎಂಜಿನಿಯರ್ ರಾಜೇಂದ್ರ ಕುಮಾರ್ ಯಾದವ್ ಹಾಗೂ ಕಿರಿಯ ಎಂಜಿನಿಯರ್ ಶಾಹಿದ್ ಮೊಹಮ್ಮದ್ ಅಮಾನತುಗೊಂಡ ಅಧಿಕಾರಿಗಳು.


ಜೂನ್ 23 ಹಾಗೂ 26ರಂದು ಸುರಿದ ಮಳೆಗೆ ರಾಮಪಥವು ಜಲಾವೃತಗೊಂಡಿತ್ತು. ಅಕ್ಕಪಕ್ಕದ ಮನೆಗಳಿಗೂ ನೀರು ನುಗ್ಗಿತ್ತು. ರಾಮ ಮಂದಿರಕ್ಕೆ ಸಂಪರ್ಕ ಕಲ್ಪಿಸುವ 14 ಕೀ.ಮಿ ಉದ್ದದ ರಸ್ತೆ ಇದಾಗಿದ್ದು, ಮಳೆಗೆ 12ಕ್ಕೂ ಹೆಚ್ಚು ಕಡೆಗಳಲ್ಲಿ ಗುಂಡಿ ಬಿದ್ದಿತ್ತು. ವಿಶೇಷ ಕಾರ್ಯದರ್ಶಿ ವಿನೋದ್ ಕುಮಾರ್ ಅವರ ಆದೇಶದ ಮೇರೆಗೆ ಅಗರ್ವಾಲ್ ಮತ್ತು ದೇಶ್ವಾಲ್ ಅವರನ್ನು ಅಮಾನತುಗೊಳಿಸಲಾಗಿದೆ. ಪಾಂಡೆ ಅವರ ಅಮಾನತು ಆದೇಶವನ್ನು ಲೋಕೋಪಯೋಗಿ ಇಲಾಖೆಯ ಮುಖ್ಯ ಎಂಜಿನಿಯರ್ ವಿಕೆ ಶ್ರೀವಾಸ್ತವ್ ಅವರು ಹೊರಡಿಸಿದ್ದಾರೆ.



Join Whatsapp